ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು.
ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.