ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿಯ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ.
ಗುಂಡು ಹಾರಿಸಿದ 12 ಜನರು ಯಾರು ಏನು ಎಂಬುದು ಇನ್ನೂ ಹೊರಬಂದಿಲ್ಲ.
ಗೃಹ ಸಚಿವ ಆರಗಜ್ಞಾನೇಂದ್ರ ಗರ್ತಿಕೆರೆ ಶಾಲೆಯ ಕಾರ್ಯಕ್ರಮದಲ್ಲಿದ್ದು ತಕ್ಷಣವೇ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ತೆರಳಿದ್ದಾರೆ.
ಸ್ಥಳದಲ್ಲಿ ಮಾಧ್ಯಮದವರು ಫೋಟೊ ಹಾಗೂ ವೀಡಿಯೋ ತೆಗೆಯುವುದನ್ನ ನಿರ್ಬಂಧಿಸಿರುವುದರಿಂದ ಘಟನೆಯ ಬಗ್ಗೆ ಇನ್ನಷ್ಟು ಅನುಮಾನಗಳು ಮೂಡಿ ಬರುತ್ತಿದೆ.
ಇನ್ನೂ ಪೊಲೀಸ್ ತನಿಖೆಯಿಂದ ಸತ್ಯಾಸತ್ಯತೆ ತಿಳಿದುಬರಬೇಕಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್