ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿದ ಹಿನ್ನಲೆ ಅನಾಥಶ್ರಮಕ್ಕೆ ಸಿಹಿ ಹಂಚಿ,ದಿನಸಿ ಸಾಮಾಗ್ರಿ ವಿತರಿಸಿ ವಿಜಯೋತ್ಸವ ಆಚರಿಸಿದ ಆಪ್ ಕಾರ್ಯಕರ್ತರು

ರಿಪ್ಪನ್‌ಪೇಟೆ: ಆರ್ಥಿಕ, ಸಾಮಾಜಿಕ, ಧಾರ್ಮಿಕ ಭಷ್ಟಾಚಾರ ನಿರ್ಮೂಲನೆ ಮಾಡುವುದರೊಂದಿಗೆ ಸರ್ವಸಮತೆಯ ರಾಷ್ಟ್ರ ನಿರ್ಮಾಣ ಮಾಡುವುದು ಅಮ್ಆದ್ಮಿ ಪಕ್ಷದ ಉದ್ದೇಶವಾಗಿದೆ ಎಂದು ಎಎಪಿ ಮುಖಂಡ ಹನೀಫ್ ಹೇಳಿದರು.


ಸಮೀಪದ ಚಿಕ್ಕಜೇನಿ ಪದ್ಮಶ್ರೀ ಅನಾಥಾಶ್ರಮದಲ್ಲಿ ಶುಕ್ರವಾರ ಪಂಜಾಬ್ ರಾಜ್ಯದಲ್ಲಿ ಆಮ್ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿರುವ ಹಿನ್ನೆಲೆಯಲ್ಲಿ ಅನಾಥರಿಗೆ ಸಿಹಿ ಹಾಗೂ ಅಗತ್ಯ ದಿನಸಿ ಸಾಮಾನು ವಿತರಿಸಿ ಮಾತನಾಡಿ ನಮ್ಮ ವಿಜಯೋತ್ಸವ ಅರ್ಥಪೂರ್ಣವಾದದು ಈಗಾಗಲೆ ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ದೆಹಲಿ ರಾಜ್ಯದಲ್ಲಿ ಆರೋಗ್ಯ, ಶಿಕ್ಷಣದಲ್ಲಿ ಕ್ರಾಂತಿಕಾರಿಕ ಬದಲಾವಣೆ ತಂದಿದ್ದಾರೆ. ಅಲ್ಲಿನ ಸರ್ವನಾಗರೀಕರಿಗೂ ಅಗತ್ಯ ಮೂಲಭೂತ ಸೌಲಭ್ಯ ಕಲಿಸಿ ಮನೆಮಾತಾಗಿದ್ದಾರೆ. ಜಾತಿ ರಹಿತ ಭ್ರಷ್ಟಾಚಾರ ಮುಕ್ತ ಮಾದರಿ ಆಡಳಿತದಿಂದ ರಾಷ್ಟ್ರವ್ಯಾಪಿ ಗಮನ ಸೆಳೆದಿದ್ದು, ಪ್ರಬುದ್ಧ ಮತದಾರರಿಂದ ಪಂಜಾಬ್‌ನಲ್ಲಿ ಸರಕಾರ ರಚನೆಯೊಂದಿಗೆ ಗೋವಾದಲ್ಲಿಯೂ ಅಸ್ಥಿತ್ವಕಂಡುಕೊಂಡಿದೆ. ದೇಶದ ಸಮಗ್ರ ಅಭಿವೃದ್ಧಿಯನ್ನು ಬಯಸಿರುವ ಪಕ್ಷ ಸಂಘಟನೆಗಾಗಿ ಕರ್ನಾಟಕ ಸಹಿತ ಎಲ್ಲಾ ರಾಜ್ಯಗಳಲ್ಲಿಯೂ ಮುಂದಿನ ದಿನಗಳಲ್ಲಿ ಎಎಪಿ ಬಲಿಷ್ಠಗೊಳಿಸಲು ಮನವಿಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಈಶ್ವರಪ್ಪ ಕುಕ್ಕಳಿ.ಹಸನಬ್ಬ.ನಾರಾಯಣ ಸಿಂಗ್, ರಾಜಾರಾಮರ್‌ ಬಾಳಿಗ, ಪದ್ಮಶ್ರೀ ಅನಾಥಾಶ್ರಮದ ಪ್ರಭಾಕರ ಬೆಳಿಸರ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

15 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

15 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

19 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

21 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

22 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago