ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.
ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್ ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ ಮೇಲೆ ವಿನಾಕಾರಣ ಹೇರಿರುವ ಶುಲ್ಕದ ಹೊರೆಯನ್ನು ಕಡಿತಗೊಳಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು
2021 ರಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಸೆಮಿಸ್ಟರ್ನ ಪೂರ್ಣ ಪರೀಕ್ಷಾ ಶುಲ್ಕವನ್ನು ಪಾವತಿಸಿದ್ದರು. ಆದರೆ ಕೋವಿಡ್ 19 ರ ಕಾರಣದಿಂದ ಪರೀಕ್ಷೆಯನ್ನು ನಡೆಸಿರುವುದಿಲ್ಲ.
ಈಗ ವಿವಿಯು ಮೂರನೇ ಸೆಮಿಸ್ಟರ್ ನ ಪೂರ್ಣ ಪರೀಕ್ಷಾ ಶುಲ್ಕವನ್ನು ಪಾವತಿಸುವಂತೆ ಪ್ರಕಟಣೆ ಹೊರಡಿಸಿದೆ. ಈ ಪರೀಕ್ಷೆಯ ಅಂಕಪಟ್ಟಿ ಶುಲ್ಕವನ್ನು ಹೊರತುಪಡಿಸಿ ಉಳಿದ ಶುಲ್ಕವನ್ನು ಕಡಿತಗೊಳಿಸುವಂತೆ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್