ಮಲೆನಾಡಿನಲ್ಲಿ ಮತ್ತೆ ಶುರುವಾಯಿತಾ ಮಂಗನ ಕಾಯಿಲೆ ಆತಂಕ..!

ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ಕಾಡಿನಲ್ಲಿ ದರಗು ತರಲು ಹೋಗಿದ್ದು ಅಲ್ಲಿಯೇ ಸೋಂಕು ತಗುಲಿದೆ.

ಕುಡುವಳ್ಳಿ ಗ್ರಾಮದ ಸುಶೀಲಮ್ಮ (69) ಹಾಗೂ ಹಿರೇಬೈಲು ಗ್ರಾಮದ ಉಷಾ (47) ಸೋಂಕಿತರು. ಈ ಇಬ್ಬರೂ ಸ್ಥಳೀಯರೇ ಆಗಿದ್ದಾರೆ. ಒಬ್ಬರನ್ನು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದರಿಂದ ತಾಲೂಕಿನಲ್ಲಿ ಈ ವರ್ಷದ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ. ಚಳಿಗಾಲ ಮುಗಿದು ಬೇಸಿಗೆ ಸಮೀಪಿಸುತ್ತಿದ್ದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಮಂಗನ ಕಾಯಿಲೆ ಕಾಡುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್‌ ತಿಂಗಳಿಂದ ಮೇ ತಿಂಗಳವರೆಗೆ ಮಲೆನಾಡನ್ನು ಇನ್ನಿಲ್ಲದಂತೆ ಕಾಡುವ, ಕೆಲ ವರ್ಷ ಮರಣ ಮೃದಂಗವನ್ನೇ ಬಾರಿಸುವ ‘ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌’ ಅಥವಾ ಸಂಕ್ಷಿಪ್ತವಾಗಿ ‘ಕೆಎಫ್‌ಡಿ’ ಎಂದೇ ಕರೆಯಲ್ಪಡುವ ಈ ಕಾಯಿಲೆಗೆ ಇದುವರೆಗೆ ಮದ್ದು ಕಂಡುಹಿಡಿಯಲಾಗಿಲ್ಲ. ಆದರೆ ಮನುಷ್ಯನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವ್ಯಾಕ್ಸಿನೇಶನ್‌ ನೀಡಲಾಗುತ್ತದೆ.

ಅರಳಗೋಡಲ್ಲಿ ಮತ್ತೆ ಕೆಎಫ್‌ಡಿ ವೈರಾಣು ಪತ್ತೆ: ಎರಡು ವರ್ಷಗಳ ಹಿಂದೆ ಮಂಗನ ಕಾಯಿಲೆಯಿಂದ 20 ಮಂದಿ ಮೃತಪಟ್ಟಿದ್ದ ಸಾಗರ ತಾಲೂಕಿನ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಸಂಗ್ರಹಿಸಿದ್ದ ಉಣ್ಣೆಯಲ್ಲಿ ಕೆಎಫ್‌ಡಿ ವೈರಾಣು ಕಂಡುಬಂದಿದೆ.
ಜನವರಿಯಲ್ಲಿ ಅರಳಗೋಡು ಗ್ರಾಪಂ ವ್ಯಾಪ್ತಿಯ ಸುಮಾರು 5 ಕಿ. ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಉಣ್ಣೆಗಳ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗ ಪ್ರಯೋಗ ಶಾಲೆಗೆ ಕಳುಹಿಸಲಾಗಿತ್ತು. ಇದರಲ್ಲಿ ಫಲಿತಾಂಶದಲ್ಲಿ ಕೆಎಫ್‌ಡಿ ವೈರಾಣು ಕಂಡುಬಂದಿದೆ. ಇದರಿಂದಾಗಿ ಮತ್ತೆ ಮಂಗನ ಕಾಯಿಲೆಯ ಆತಂಕ ಮನೆ ಮಾಡಿದೆ.

2019ರಲ್ಲಿ ಅರಳಗೋಡು ಗ್ರಾಪಂ ವ್ತಾಪ್ತಿಯಲ್ಲಿ ಕೆಎಫ್‌ಡಿ ಸೋಂಕು ಸ್ಫೋಟಗೊಂಡಿದ್ದು, ನೂರಾರು ಜನರು ಇದರಿಂದ ಬಳಲಿದ್ದರು. ಸುಮಾರು 20 ಜನರಿಗೂ ಅಧಿಕ ಮಂದಿ ಮೃತಪಟ್ಟಿದ್ದರು. ಕೊನೆಗೆ ಯಾವ ಮಟ್ಟದ ಭೀತಿ ಏರ್ಪಟ್ಟಿತ್ತು ಎಂದರೆ ಸ್ವತಃ ಜಿಲ್ಲಾಧಿಕಾರಿಗಳು ಇಲ್ಲಿ ಗ್ರಾಮ ವಾಸ್ತವ್ಯ ಮಾಡಿ ಜನರಲ್ಲಿನ ಆತಂಕ ದೂರ ಮಾಡುವ ಯತ್ನ ನಡೆಸಿದ್ದರು. ಹೊರಗಿನಿಂದ ಯಾರೊಬ್ಬರೂ ಗ್ರಾಮಕ್ಕೆ ಬಾರದ ಸ್ಥಿತಿ ನಿರ್ಮಾಣವಾಗಿತ್ತು.

ನಿತ್ಯ ಒಬ್ಬಿಬ್ಬರು ಆಸ್ಪತ್ರೆಗೆ ದಾಖಲಾಗತೊಡಗಿದ್ದರು. ಜಿಲ್ಲಾಡಳಿತ ಉಚಿತವಾಗಿ ಅರಳಗೋಡು ಗ್ರಾಮದಿಂದ ಮಣಿಪಾಲ ಆಸ್ಪತ್ರೆಗೆ ನಿತ್ಯ ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿತ್ತಲ್ಲದೆ, ಮಣಿಪಾಲದಲ್ಲಿನ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿತ್ತು. ಸದನದಲ್ಲೂ ಈ ಕುರಿತು ಚರ್ಚೆ ನಡೆದಿತ್ತು. ಆ ಬಳಿಕ ಇಲ್ಲಿ ವ್ಯಾಪಕ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದರಿಂದ ಸೋಕು ಕಡಿಮೆಯಾಗಿತ್ತು. ಆದರೆ ಈ ವರ್ಷ ಪುನಃ ಸೋಂಕಿನ ವೈರಾಣು ಕಾಣಿಸಿಕೊಂಡಿರುವುದರಿಂದ ಸಹಜವಾಗಿಯೇ ಜನರಲ್ಲಿ ಆತಂಕ ಮೂಡಿದೆ.

ಕೋವಿಡ್‌ ಲಸಿಕೆ ಪಡೆದವರು ಕೆಎಫ್‌ಡಿಗೆ ಹಿಂದೇಟು: ಇನ್ನು ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳನ್ನು ಬೇಸಿಗೆಯಲ್ಲಿ ಕಾಡುವ ಕೆಎಫ್‌ಡಿ ವೈರಾಣುವಿನ ವಿರುದ್ಧದ ಹೋರಾಟಕ್ಕೆ ಕೊರೋನಾ ವ್ಯಾಕ್ಸಿನ್‌ ಅಡ್ಡಿಯಾಗಿದೆ. ಕೋವಿಡ್‌ ವ್ಯಾಕ್ಸಿನ್‌ ಪಡೆದವರು ಕೆಎಫ್‌ಡಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವು ತಂದಿದೆ.

ಕೋವಿಡ್‌ ಲಸಿಕೆ ಪಡೆದ 14 ದಿನದ ನಂತರ ಕೆಎಫ್‌ಡಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ತಜ್ಞರು ತಿಳಿಸಿದ್ದರೂ ಜನರು ಸ್ಪಂದಿಸುತ್ತಿಲ್ಲ. ಈ ಬಾರಿ ಜಿಲ್ಲೆಯ 1.95 ಲಕ್ಷ ಜನರಲ್ಲಿ ಕೇವಲ 95 ಸಾವಿರ ಜನರಿಗಷ್ಟೇ ಕೆಎಫ್‌ಡಿ ಲಸಿಕೆ ನೀಡಲಾಗಿದೆ. ಅಂದರೆ ಶೇ.47ರಷ್ಟುಮಾತ್ರ ಸಾಧನೆ ಆಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

8 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

9 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

10 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago