ಮಹಿಳೆ ಇಂದು ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ : ಕೆಪಿಸಿಸಿ ವಕ್ತಾರೆ ಪ್ರಪುಲ್ಲಾ ಮಧುಕರ್

ಹೊಸನಗರ :- ಮಹಿಳೆ ಎಂದಿಗೂ ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ, ಸಮಾಜದಲ್ಲಿ ಅವಳಿಗೂ ಸಹಾ ಪುರುಷ ಸಮಾನತೆ ಹಕ್ಕನ್ನು ನೀಡಲು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಪುರುಷ ಸಮಾನಾರ್ತಕ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ  ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆ.ಪಿ.ಸಿ.ಸಿ ವಕ್ತಾರೆ ಪ್ರಪುಲ್ಲಾ ಮಧುಕರ್ ರವರು ಅಭಿಪ್ರಾಯ ಪಟ್ಟರು.

ಇಂದು ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ  ಮಹಿಳೆಯರಿಗೆ ಶೋಷಣೀಯ ಪದ್ಧತಿ ನಡೆಯುತ್ತಿತ್ತು, ಮಹಿಳೆಯು ಸಮಾಜದಲ್ಲಿ ಗುಲಾಮಗಿರಿ ವೃತ್ತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳ ಬೇಕಾಗಿತ್ತು. ಇದನ್ನು ಗಮನಿಸಿ ಎಚ್ಚೆತ್ತು ಕೊಂಡು ಹಲವಾರು ವರ್ಷಗಳಿಂದ ನಿರಂತರ ಹೋರಾಟ ನಡೆಸಿದ ಫಲವಾಗಿ ಇಂದು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಲ್ಲದೇ ಹಲವಾರು ರೀತಿಯಾ ಉದ್ಯೋಗಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಪುರುಷ ಸಮಾನ ಹಕ್ಕನ್ನು ಪಡೆಯುತ್ತಿದ್ದಾಳೆ. ಈ ಕೊಡುಗೆಯು  ಕಾಂಗ್ರೆಸ್ ಸರ್ಕಾರದ ಕೊಡುಗೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಶಿಕ್ಷಣದ ಬಗ್ಗೆ ತಾರತಮ್ಯ ನಡೆಸುವಂತಹಾ ಪ್ರವೃತ್ತಿ ಬೆಳೆಯುತ್ತಿದೆ. ಯಾವುದೇ ಜನಾಂಗದ ಮಹಿಳೆಯು ಶಿಕ್ಷಣವನ್ನು ಪಡೆಯುವುದು ಅವಳ ಹಕ್ಕು. ಇಂತಹ ಹಕ್ಕಿನಿಂದ ಮಹಿಳೆಯರು ವಂಚಿತರಾಗುವ ಸನ್ನಿವೇಶ ಇತ್ತೀಚೆಗೆ ಬಂದೊದಗಿದೆ. ಅನೇಕ ಮಹಿಳೆಯರು ಪಿ.ಯು.ಸಿ ಪರೀಕ್ಷೆಗೆ ಹೋಗದಂತಹಾ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಸರ್ಕಾರವು ಅಧಿಕಾರಕ್ಕೆ ಬಂದಲ್ಲಿ ಸರ್ವ ಧರ್ಮಗಳ ಜನಾಂಗವನ್ನು ಮಾತೃ ರೂಪದಲ್ಲಿದ್ದು ಎಲ್ಲರನ್ನೂ ಸಮಾನಾತ್ಮಕವಾಗಿ ಕಾಣುವಂತಾಗಬೇಕಿದೆ ಎಂದರು.

ಹಿಂದೂ ಧರ್ಮಕ್ಕೆ ಯಾವುದೇ ರೀತಿಯ ಗುತ್ತಿಗೆದಾರರಾಗಲೀ ಏಜೆಂಟರಾಗಲೀ ಇಲ್ಲ, ಹಿಂದೂ ಧರ್ಮಕ್ಕರ ಅದರದ್ದೇ ಆದ ವಿಶೇಷತೆ ಹೊಂದಿದ್ದು, ಈ ಧರ್ಮವು ಆಳವಾಗಿದ್ದು,  ಹಿಂದೂ ಧರ್ಮದಲ್ಲಿ ಅಶಾಂತಿ ಸೃಷ್ಟಿಸುವ ಪದ್ಧತಿಗಳಿಲ್ಲ ಬಸವಣ್ಣನವರು ಹೇಳಿದಂತೆ “ದಯೆಯೇ ಧರ್ಮದ ಮೂಲವಯ್ಯ” ಎಂಬಂತೆ  ದಯೆಯಿಲ್ಲದ ಧರ್ಮ ಯಾವುದಯ್ಯ ಎನ್ನುವ ರೀತಿ ಹಿಂದುತ್ವದಲ್ಲಿ ಅನ್ಯರಿಗೆ ದಯೆ ತೋರಿಸುವುದೇ ಧ್ಯೇಯವಾಗಿದೆ. ಇದನ್ನು ಅನ್ಯರಿಂದ ಕಲಿಯಬೇಕಾಗಿಲ್ಲ ಎಂದರು.

ಕಳೆದ ಎರಡು ವರ್ಷದಲ್ಲಿ ಕರೋನ ಸಂಕಷ್ಟಕ್ಕೆ ಜಾತಿ ಭೇದವಿಲ್ಲದೇ ಸಾವಿರಾರಕ್ಕೂ ಹೆಚ್ಚು ಜನ ಮೃತರಾದರು. ಕರೋನ ಸಂಕಷ್ಟದಿಂದ ಅನೇಕರು ಒಂದು ಹೊತ್ತು ಊಟಕ್ಕೂ ಪರಿತಪ್ಪಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದ ಅವರು ಇತ್ತೀಚಿನ ದಿನದ ಶಿಕ್ಷಣ ನೀತಿಯಿಂದ ಅನೇಕ ಮಹಿಳೆಯರು ಹಾಗೂ ಪುರುಷರು, ಯುವಕ, ಯುವತಿಯರು  ಶಿಕ್ಷಣ ವಂಚಿತರಾಗುತ್ತಿದ್ದಾರಲ್ಲದೇ ಉದ್ಯೋಗವಿಲ್ಲದೆ ಪರಿತಪ್ಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಕಾಂಗ್ರೆಸ್ ಪಕ್ಷವು ಸರ್ವ ಜ‌ನಾಂಗ ಹಾಗೂ ಸರ್ವ ಧರ್ಮಗಳನ್ನೊಳಗೊಂಡ ಜಾತ್ಯಾತೀತ ಪಕ್ಷವಾಗಿದ್ದು ಇಲ್ಲಿ ಯಾರೂ ಮೇಲು ಕೀಳು ಎಂಬ ಭೇದ-ಭಾವಗಳಿಲ್ಲ ಆದ್ದರಿಂದ ನಮ್ಮ‌ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ನಾಯಕರು ಇದನ್ನು ಎಲ್ಲರಲ್ಲೂ ಮನವರಿಕೆ ಮಾಡುವ ಮೂಲಕ ಡಿಜಿಟಲ್‌ ಸದಸ್ಯತ್ವ ಅಭಿಯಾನಕ್ಕೆ ಮುಂದಾಗಿದೆ ಎಂದು ತಿಳಿಸಿದರು.

ನಂತರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನಿತ ಮಾತನಾಡಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಮೀಸಲಾತಿ ನೀಡಿ ಅವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಹ ಯೋಜನೆ ರೂಪಿಸಲಾಗಿದ್ದು ಇದರಿಂದ ಇತ್ತೀಚಿನ ದಿನಗಳಲ್ಲಿ‌ ಮಹಿಳೆಯರು ಸ್ವಾವಲಂಬಿಯ ಬದುಕನ್ನು ನಡೆಸಲು ಮನೆಯಿಂದ ಹೊರ ಬರುವಂತಹ ಕೆಲಸವಾಗಿದೆ.
ಬಿ.ಜೆ.ಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾತಿ ಜಾತಿಗಳಲ್ಲಿ ಧರ್ಮ ಧರ್ಮಗಳಲ್ಲಿ ಒಡಕು ಮೂಡಿಸುವ ಕೆಲಸ ನಡೆಯುತ್ತಿದೆ. ಕೇಸರಿ ಶಾಲೊಂದು ಧಾರ್ಮಿಕ ಸಂಕೇತವಾಗಿದೆ ಎಂದ ಅವರು,ತಾಲ್ಲೂಕಿನ ಪ್ರತೀ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲಾ ಗ್ರಾಮಗಳಲ್ಲಿಯೂ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಇದಕ್ಕೆ ತಾಲೂಕಿನ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹೆಚ್ಚಿನ ಅಧಿಕ ಒತ್ತು ನೀಡಿ‌ ಹೆಚ್ಚಿನ‌ ಸದಸ್ಯತ್ವವನ್ನು ನೊಂದಣಿ ಮಾಡಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ‌.ನಾಗರಾಜ್, ಪುರಸಭಾ ಸದಸ್ಯ ಅಶ್ವಿನಿ ಕುಮಾರ್, ಮಾಜೀ ತಾಲ್ಲೂಕು ಪಂಚಾಯತ್ ಸದಸ್ಯ ಎರಗಿ‌ ಉಮೇಶ್,  ಗ್ರಾಮ‌ ಪಂಚಾಯಿತಿ ಸದಸ್ಯರಾದ ವಿಶ್ವ,  ಮಹೇಂದ್ರ,  ಶೀರಜಾ, ಕಾಂಗ್ರೇಸ್ ಪಕ್ಷದ ಮುಖಂಡರಾದ ಸದಾ ಶಿವ ಶ್ರೇಷ್ಠಿ, ನೇತ್ರಾವತಿ ಸುಬ್ರಾಯ ಭಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



ವರದಿ : ಪುಷ್ಪಾ ಜಾಧವ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

6 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

7 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

9 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago