ಮಾ. 12 ಮತ್ತು 13 ರಂದು ಗಣಪತಿ ಕೆರೆಹಬ್ಬ ಕಾರ್ಯಕ್ರಮ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.12ರಂದು ಬೆಳಿಗ್ಗೆ 6ಕ್ಕೆ ಗಣಪತಿ ಕೆರೆ ಸ್ವಚ್ಚತೆ ಕಾರ್ಯಕ್ರಮಕ್ಕೆ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಗರದ ವಿವಿಧ ಸಂಘಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಅದೇ ದಿನ ಸಂಜೆ 6-30ಕ್ಕೆ ಗಂಗಾರತಿ ಮಾದರಿಯಲ್ಲಿ ಗಣಪತಿ ಕೆರೆಯ ಗಣಪತಿ ವಿಸರ್ಜನೆ ಮಾಡುವ ಸ್ಥಳದಲ್ಲಿ ಸಾಗರಾರತಿ ಕಾರ್ಯಕ್ರಮ ನಡೆಯಲಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು ಕೆರೆಯ ಎರಡೂ ದಂಡೆಯಲ್ಲಿ ಮಹಿಳೆಯರು ನಿಂತು ಗಣಪತಿ ಕೆರೆಗೆ ಆರತಿ ಬೆಳಗಲಿದ್ದಾರೆ. ನಂತರ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡುತ್ತಾರೆ ಎಂದರು.
ನಂತರ ಸಾಗರದ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಿಂದ ಮೊದಲ ಬಾರಿಗೆ ಕಾಲೇಜು ಸಾಂಸ್ಕೃತಿಕ ಹಬ್ಬ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಂದ ವಿಶೇಷವಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಬೇರೆಬೇರೆ ಭಾಗದ ನೃತ್ಯ ಪ್ರದರ್ಶನ ನಡೆಯಲಿದೆ. ಇದರ ಜೊತೆಗೆ ಸ್ಥಳೀಯರಿಂದ ಭಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ ಎಂದು ತಿಳಿಸಿದರು.
ಕೆರೆಹಬ್ಬ ಅಂಗವಾಗಿ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಪ್ರೋ ಕಬ್ಬಡ್ಡಿ ಪಂದ್ಯಾವಳಿ ನಡೆಯಲಿದೆ. ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಹೆಸರಾಂತ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಇಂದಿರಾಗಾಂಧಿ ಕಾಲೇಜಿನ ಎದುರಿಗೆ ಇರುವ ಸಂತೆ ಮಾರುಕಟ್ಟೆ ಸ್ಥಳದಲ್ಲಿ ಆಹಾರ ಮೇಳವನ್ನು ಆಯೋಜಿಸಿದೆ. 13ರಂದು ಕೆರೆ ಸ್ವಚ್ಛತಾ ಕಾರ್ಯ ಮುಂದುವರೆಯಲಿದ್ದು, ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನದ ಜೊತೆಗೆ ಕಲರ‍್ಸ್ ಕನ್ನಡ್ಛೆದೆ ತುಂಬಿ ಹಾಡಿದೆನು ವಿಜೇತ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಆರ್.ಗಣೇಶಪ್ರಸಾದ್ ಮಾತನಾಡಿ, ಇಂದಿರಾಗಾಂಧಿ ಕಾಲೇಜಿನ ಮಕ್ಕಳು ಆಳ್ವಾಸ್ ಮಾದರಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅವರಿಗೆ ಶಾಸಕರ ಮಾರ್ಗದರ್ಶನದಲ್ಲಿ ಪ್ರೋತ್ಸಾಹಿಸಲಾಗಿದೆ. ಇದರ ಜೊತೆಗೆ ಗಣಪತಿ ಕೆರೆ ಸ್ವಚ್ಛತಾ ಕಾರ್ಯಕ್ರಮ ಸತತ ಮೂರು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಇನ್ನಷ್ಟು ಕೆರೆ ಸುಂದರಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಮಾ.12 ಮತ್ತು13 ರಂದು ಸಾಗರದಲ್ಲಿ ಭರ್ಜರಿ ಗಣಪತಿ ಕೆರೆಹಬ್ಬ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್