ಮಾರ್ಚ್ 6ರಿಂದ ಬಾಲ್ಯ ವಿವಾಹ ನಿಷೇಧ ಅಭಿಯಾನ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

ಬಾಲ್ಯ ವಿವಾಹ ನಿಷೇಧ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 6ರಿಂದ ಜಿಲ್ಲೆಯಾದ್ಯಂತ `ವೀಡಿಯೋ ಆನ್ ವೀಲ್ಸ್’ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.


ಅಭಿಯಾನ ಜಿಲ್ಲೆಯ 41 ಹೋಬಳಿಗಳಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಂಚಾರಿ ವಾಹನದ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ವಿಡಿಯೋಗಳನ್ನು ಪ್ರದರ್ಶಿಸಲಾಗುವುದು. ಎಲ್ಲಾ ಹೋಬಳಿ ಹಂತಗಳಲ್ಲಿ ಅಭಿಯಾನದ ಜ್ಯೋತಿ ಸಂಚರಿಸಲಿದೆ. ಬಾಲ್ಯ ವಿವಾಹ ನಿಷೇಧ ಕುರಿತು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ, ಸಹಿ ಅಭಿಯಾನ, ಮಾನವ ಸರಪಳಿ ಮೂಲಕ ಜಾಗೃತಿ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ, ಕರಪತ್ರಗಳ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಹೋಬಳಿ ಕೇಂದ್ರಸ್ಥಾನಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ, ಬಸ್ ನಿಲ್ದಾಣ, ಸಂತೆ, ಪ್ರಮುಖ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಬಾಲ್ಯ ವಿವಾಹ ನಡೆಯದಂತೆ ಮತ್ತು ಬಾಲ್ಯ ವಿವಾಹ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸುವ ಕುರಿತು ಠರಾವು ಹೊರಡಿಸಬೇಕು. ಬಾಲ್ಯ ವಿವಾಹದಿಂದಾಗಿ ಮಕ್ಕಳ ಮೇಲೆ ಉಂಟಾಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳ ಕುರಿತು ಆರೋಗ್ಯ ಇಲಾಖೆ ವತಿಯಿಂದ ಅರಿವು ಮೂಡಿಸುವ ಕಾರ್ಯವನ್ನು ಈ ಅವಧಿಯಲ್ಲಿ ಮಾಡಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.

ಚಾಲನೆ: ಮಾರ್ಚ್ 6ರಂದು ಬೆಳಿಗ್ಗೆ 9ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಮತ್ತಿತರ ಗಣ್ಯರು ಉಪಸ್ಥಿತರಿರುವರು.

ಪ್ರತಿಜ್ಞಾ ವಿಧಿ ಬೋಧನೆ: ಬಾಲ್ಯ ವಿವಾಹ ನಿಷೇಧ ಕುರಿತಾದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಬೋಧಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

8 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

8 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

10 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago