ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ
ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.
ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಕರ್ನಾಟಕ ಸರ್ಕಾರವು ಶಿವಮೊಗ್ಗ ಕಾರವಾರ ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನು ತೆರೆಯಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಈ ಸಾಲಿನ ಬಜೆಟಿನಲ್ಲಿ ಅನುದಾನವನ್ನು ಘೋಷಿಸಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಟ್ಟ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ಸಹಕಾರ ನೀಡಿದ ಗ್ರಾಮೀಣ ಅಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಸಭಾ ಸದಸ್ಯರಾದ ಬಿವೈ ರಾಘವೇಂದ್ರ. ಸಾಗರ ಹೊಸನಗರದ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು