ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ

ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.

ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಕರ್ನಾಟಕ ಸರ್ಕಾರವು ಶಿವಮೊಗ್ಗ ಕಾರವಾರ ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನು ತೆರೆಯಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಈ ಸಾಲಿನ ಬಜೆಟಿನಲ್ಲಿ ಅನುದಾನವನ್ನು ಘೋಷಿಸಿದ್ದಾರೆ.

ಹಿಂದುಳಿದ ವರ್ಗಗಳ  ಅಭಿವೃದ್ಧಿಗೆ ದಿಟ್ಟ ಹೆಜ್ಜೆ  ಇಟ್ಟ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ಸಹಕಾರ ನೀಡಿದ ಗ್ರಾಮೀಣ ಅಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ  ಲೋಕಸಭಾ ಸದಸ್ಯರಾದ ಬಿವೈ ರಾಘವೇಂದ್ರ. ಸಾಗರ ಹೊಸನಗರದ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

16 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

16 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

20 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

22 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

23 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago