ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ SSLC ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :  ಈ ಬಾರಿಯ SSLC ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ.

ಪಟ್ಟಣದ ಸರ್ಕಾರಿ ಪ್ರೌಢಶಾಲೆ ಹಾಗೂ‌ ಮೇರಿ ಮಾತಾ ಶಾಲೆಯಲ್ಲಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಲಾಗಿತ್ತು.ಮೊದಲ ದಿನದ ಪರೀಕ್ಷೆಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಹಾಜರಾಗಿದ್ದರು.

ಪೋಷಕರು ಪರೀಕ್ಷೆ ಮುಗಿಯುವವರೆಗೂ ಶಾಲಾ ಆವರಣದಲ್ಲಿ ಕಾಯುತ್ತಿದ್ದ ಸನ್ನಿವೇಶ ಕಂಡುಬಂತು.


 ಹೊಸನಗರ ತಾಲೂಕಿನಲ್ಲಿ ಒಟ್ಟಿ 1620 ವಿದ್ಯಾರ್ಥಿಗಳಲ್ಲಿ 1615 ವಿದ್ಯಾರ್ಥಿಗಳು ಈ ಬಾರಿಯ SSLC ಪರೀಕ್ಷೆಗೆ ಹಾಜರಾಗಿದ್ದಾರೆ.

ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 9ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ರಿಪ್ಪನ್‌ಪೇಟೆಯಲ್ಲಿ ಎರಡು ಕೇಂದ್ರಗಳು ಜಯನಗರ, ಮಾರುತಿಪುರ, ನಗರ, ಅಮೃತದಲ್ಲಿ ಹಿಂದಿನಿಂದಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು ನಿಟ್ಟೂರು, ಜಯನಗರ, ಮಾರುತಿಪುರ ಹಾಗೂ ಕಮ್ಮಚಿಯಲ್ಲಿ ನೂತನವಾಗಿ ಪರೀಕ್ಷಾ ಸೆಂಟರ್ ತೆರೆಯಲಾಗಿತ್ತು.

ಪರೀಕ್ಷೆಗೆ 80ಜನ ಮೇಲ್ವೀಚಾರಕರು, 9ಜನ ಮೊಬೈಲ್ ಅಧಿಕಾರಿಗಳು, 9ಜನ ಮುಖ್ಯ ಅಧೀಕ್ಷಕರುಗಳನ್ನು, 9ಜನ ಅಧೀಕ್ಷಕರುಗಳು, 3ಜನ ವೀಕ್ಷಕರನ್ನು ನೇಮಿಸಲಾಗಿದ್ದು ಹೊಸನಗರ ತಾಲ್ಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಪರೀಕ್ಷಾ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು ಪ್ರತಿಯೊಂದು ಕೇಂದ್ರಗಳಿಗೆ ದೈಹಿಕ ಶಿಕ್ಷಕರನ್ನು ನೇಮಿಸಲಾಗಿದ್ದು ಹೊಸನಗರ ತಾಲ್ಲೂಕು ತಹಶೀಲ್ದಾರ್ ವಿ.ಎಸ್. ರಾಜೀವ್ ಮತ್ತು ಸಿಬ್ಬಂದಿಗಳು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಸಿಬ್ಬಂದಿಗಳು ವಾಹನದ ವ್ಯವಸ್ಥೆಯನ್ನು ನೀಡಿದ್ದು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಅಹಿತಕರ ಘಟನೆ ನಡೆಯದಂತೆ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ನೇತೃತ್ವದ ತಂಡದವರಾದ ಸಹಾಯಕ ನಿರ್ದೆಶಕರು, ಅಕ್ಷರ ದಾಸೋಹ ಸಮಾನ್ವಯಾಧಿಕಾರಿ ಬಿ.ಆರ್.ಸಿ ಯವರಾದ ನಾಗರಾಜ್ ಎಸ್.ಪಿ, ಅಧೀಕ್ಷಕರಾದ ಅಶೋಕ್, ಮಾರುತಿರವರು 9ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರ್:

ಹೊಸನಗರ ತಾಲ್ಲೂಕಿನಲ್ಲಿ ಸುಮಾರು 40 ವಿದ್ಯಾರ್ಥಿನಿಯರಿದ್ದು ಅವರೆಲ್ಲರೂ ಶಾಲೆಯವರೆಗೆ ಹಿಜಾಬ್ ಹಾಕಿಕೊಂಡು ಬಂದು ಪರೀಕ್ಷಾ ಕೊಠಡಿಗೆ ಹಿಜಾಬ್ ತೆಗೆದು ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೇ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

4 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

5 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

6 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago