ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು ಗ್ರಾಮಸ್ಥರ ಮೇಲೆ ದರ್ಪ ತೋರಿಸಿದ್ದಾನೆ.ಈ ಸಂಧರ್ಭದಲ್ಲಿ ಆಕ್ರೋಶಿತರಾದ ಗ್ರಾಮಸ್ಥರು ಗುತ್ತಿಗೆದಾರನ ಬೆವರಿಳಿಸಿ ಕಾಮಗಾರಿ ನಿಲ್ಲಿಸಿ ಕೂಡಲೇ ಜಿಲ್ಲಾ ಪಂಚಾಯತ್ ಸಿ ಇ ಒ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನೆ ನಡೆಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು ನಮ್ಮ ಮೂಡ್ಲಿ ಗ್ರಾಮದಿಂದ ಸದಸ್ಯೆಯಾಗಿ ಆಯ್ಕೆಯಾದ ಪಲ್ಲವಿ ಚೇತನ್ ರವರು ಹುಂಚಾ ಗ್ರಾಪಂ ಅಧ್ಯಕ್ಷರಾಗಿದ್ದು ಅವರು ಪ್ರಭಾವಿಗಳಿಗೆ ಮಣಿದು ಈ ಅನ್ಯಾಯದ ವಿರುದ್ದ ದನಿ ಎತ್ತುತ್ತಿಲ್ಲ.ನಮ್ಮ ಊರಿಗೆ ಮಂಜೂರಾದ ರಸ್ತೆಯನ್ನು ನಮ್ಮೂರಿಗೆ ಕೊಡಿ ಇಲ್ಲದಿದ್ದಲ್ಲಿ ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಮೂಡ್ಲಿ ಗ್ರಾಮದ ರಸ್ತೆ ಕಾಮಗಾರಿಗೆ ರಾಜ್ಯ ಗೃಹಸಚಿವರು ಶಂಕುಸ್ಥಾಪನೆ ನೇರವೇರಿಸಿದ್ದು ಇದನ್ನು ಮಂಜೂರಾದ ಸ್ಥಳದಿಂದ ಕಾಮಗಾರಿಯನ್ನು ಪ್ರಾರಂಭಿಸದೆ ಬೇರೆ ಭಾಗದಲ್ಲಿ ಕಾಮಗಾರಿ ಆರಂಭಸಿದ್ದಾರೆಂದು ತೀವ್ರ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.

ನಂತರ ಗ್ರಾಮಸ್ಥರೆಲ್ಲಾ ಹುಂಚಾ ನಾಡಕಛೇರಿಗೆ ತೆರಳಿ ಉಪ ತಹಶಿಲ್ದಾರ್ ಮೂಲಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ರತ್ನಾಕರಗೌಡ್ರು ಕಬ್ಬಿನಮಕ್ಕಿ, ಲಿಂಗಪ್ಪ, ಅರುಣ,ಆದರ್ಶ ಹುಂಚದಕಟ್ಟೆ, ಕುಮಾರ್, ಚಂದನ್, ದಿವಾಕರ್, ನೀಲಪ್ಪ, ಪುರುಷೋತ್ತಮ್, ಸೋಮಶೇಖರ, ಪಣಿರಾಜ್, ಗುರುಭಂಡಾರಿ, ಗೀತಾ, ವಿದ್ಯಾ, ರಾಮಚಂದ್ರ, ಲಕ್ಷ್ಮಣ ಆಚಾರ್, ಟೀಕಾಚಾರ್, ರವಿಗೌಡರ್, , ಕೇಶವ ನಾಗರಹಳ್ಳಿ, ಸುರೇಶ ಗುಡ್ಡೆಕೊಪ್ಪ, ಗುರುರಾಜ್ ಸುಣಕಲ್ಲು, ಉಲ್ಲಾಸ್ ಕಡಸೂರು, ರಾಜಶೇಖರ ಹೀರೆಬೈಲು, ಪೃಥ್ವಿರಾಜ್.ಕೆ.ಸಿ ಇನ್ನಿತರರು ಭಾಗವಹಿಸಿದ್ದರು.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

22 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

22 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago