Breaking
12 Jan 2026, Mon

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ.


ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ ಅಭಾವದಿಂದ ಈಗ ಶಿವಮೊಗ್ಗದ ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆದರೆ ವೈದ್ಯರು ಸೂಕ್ತ ಚಿಕಿತ್ಸೆಗೆ ಮತ್ತೆ ಮಂಗಳೂರಿನ ಎನಪೋಯಾ ಆಸ್ಪತ್ರೆಗೆ ದಾಖಲಿಸಲು ತಿಳಿಸಿದ್ದಾರೆ.


ರಾಜೇಶ್ ಅವರ ಚಿಕಿತ್ಸೆಗೆ ಅವರ ಪತ್ನಿಯಾದ ಭಾರತಿ ದಾನಿಗಳ ಬಳಿ ಅಂಗಲಾಚಿ  ಧನಸಹಾಯ ಕೋರಿದ್ದಾರೆ, ರಾಜೇಶ್ ಇವರಿಗೆ ಪತ್ನಿ ಹಾಗೂ ಎರಡು ಚಿಕ್ಕ ಮಕ್ಕಳು ಇರುತ್ತಾರೆ, ಈ ಕುಟುಂಬಕ್ಕೆ ಯಾವುದೇ ಆರ್ಥಿಕ ಆದಾಯ ಇರುವುದಿಲ್ಲ.

ಸಹೃದಯ ದಾನಿಗಳು ತಮ್ಮ ಕೈಲಾದಷ್ಟು ಈ ಕುಟುಂಬಕ್ಕೆ ಸಹಾಯ ಮಾಡುವುದರ ಮೂಲಕ ಬಡ ಕುಟುಂಬಕ್ಕೆ ನೆರವಾಗಬೇಕೆಂಬುವುದು ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿಯ ಮನವಿ.


ರಾಜೇಶ್ ರವರ ಪತ್ನಿ ಭಾರತಿ ರವರ ಅಕೌಂಟ್ ನಂಬರ್ :

Union Bank
Ripponpet
Bank a/c number : 520101045903421, 
IFSC code:UBIN93228             

phone pe number :- 7975984738 ( ನಿರ್ಮಲ ರಾಜೇಶ್ ಅವರ ತಂಗಿ )

ಹೆಚ್ಚಿನ ಮಾಹಿತಿಗಾಗಿ +91 99029 34019 ನಂಬರ್ ಗೆ ಕರೆ ಮಾಡಿ 

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *