ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು.
ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆ ಅನುಷ್ಠಾನಗೊಳಿಸಿರುವುದು ಸ್ವಾಗತಾರ್ಹವಾಗಿದೆ. ಈ ಸೌಲಭ್ಯದ ಸದುಪಯೋಗವನ್ನು ರೈತನಾಗರೀಕರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂಧರ್ಭದಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಪ್ರವೀಣ್, ಗ್ರಾ.ಪಂ.ಸದಸ್ಯರಾದ ಸುಧೀಂದ್ರ ಪೂಜಾರಿ, ಆಸಿಫ್ ಭಾಷಾಸಾಬ್, ಸುಂದರೇಶ್, ವಿನೋಧ, ಜಿ.ಡಿ.ಮಲ್ಲಿಕಾರ್ಜುನ, ಪ್ರಕಾಶ್‌ಪಾಲೇಕರ್,ಗ್ರಾಪಂ ಪಿಡಿಓ ಜಿ.ಚಂದ್ರಶೇಖರ್, ಗ್ರಾಮ ಲೆಕ್ಕಾಧಿಕಾರಿ ಓಂಕಾರಯ್ಯ, ಮುಖಂಡರಾದ ಆರ್.ಎನ್.ಮಂಜುನಾಥ ಇನ್ನಿತರರು ಹಾಜರಿದ್ದರು.