ರಿಪ್ಪನ್ ಪೇಟೆ :ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಅಭೂತಪೂರ್ವ ಗೆಲುವಿನ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ :

ರಿಪ್ಪನ್ ಪೇಟೆ : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ‌ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ದ ವತಿಯಿಂದ  ವಿಜಯೋತ್ಸವ ಆಚರಿಸಲಾಯಿತು.

ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ,ವಿಜಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ ಪ್ರಧಾನಿ ಮೋದಿ,ಮುಖ್ಯಮಂತ್ರಿ ಬೊಮ್ಮಾಯಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾ ನಾಥ್ ,ಯಡಿಯೂರಪ್ಪ ಹಾಗೂ ಶಾಸಕ ಹರತಾಳು ಹಾಲಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.


ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಪ್ರಪಂಚದಲ್ಲಿಯೇ ಬಿಜೆಪಿ ಪಕ್ಷ ಮಾದರಿ ಪಕ್ಷವಾಗಿದೆ.ದೇಶದಲ್ಲಿಯೇ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಪ್ರಚಂಡ ಗೆಲುವು ಸಾಧಿಸುವುದರೊಂದಿಗೆ ಕಾರ್ಯಕರ್ತರಲ್ಲಿ ಹುಮ್ಮಸು ತುಂಬಿದೆ. ಬಿಜೆಪಿ ಆಡಳಿತಕ್ಕೆ ಮೆಚ್ಚುಗೆ ದೊರೆತಿರುವ ಜನಾದೇಶವಿದು. ಇದು ಕೇವಲ ಕಾರ್ಯಕರ್ತರ ಗೆಲುವಲ್ಲ , ರಾಷ್ಟ್ರೀಯತೆ ವಿಚಾರ, ಭಾರತವನ್ನು ವಿಶ್ವಗುರುವನ್ನಾಗಿ ಮಾಡುವ ಪ್ರಯತ್ನಕ್ಕೆ ಗೆಲುವು ಸಿಕ್ಕಿದೆ. ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ’ ಎಂದು ಹೇಳಿದರು‌.

ಈ ಸಂಧರ್ಭದಲ್ಲಿ ಮುಖಂಡರಾದ ಅರ್.ಟಿ ಗೋಪಾಲ್, ಸುರೇಶ್ ಸಿಂಗ್, ಆನಂದ್ ಮೆಣಸೆ, ಮಲ್ಲಿಕಾರ್ಜುನ ಜಿ.ಡಿ, ಪಿ.ರಮೇಶ್, ಸುದಿಂದ್ರ ಪೂಜಾರಿ, ಎನ್.ಸತೀಶ್, ಕೀರ್ತಿ ಗೌಡ, ಹೂವಪ್ಪ, ರವಿ ಆಚಾರ್, ಕೇತಾರ್ಜಿ ರಾವ್, ಮಂಜುನಾಥ್ ಕೆರೆಹಳ್ಳಿ, ನಾಗರಾಜ್ ಕೆದ್ದಲಗುಡ್ಡೆ, ನವೀನ್ ಆರ್.ಎಂ, ರಚನ್ ಕುಮಾರ್, ದಿವಾಕರ್ ಬೆಳ್ಳೂರು,ರಾಘವೇಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

19 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago