ರಿಪ್ಪನ್ ಪೇಟೆ : ನಡೆದಾಡುವ ದೇವರು ತ್ರಿವಿಧ ದಾಸೋಹಿ,ಶತಾಯುಷಿ,ಕಾಯಕಯೋಗಿ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು 115ನೇ ವರ್ಷದ ಜನ್ಮದಿನಾಚರಣೆಯನ್ನು ಏಪ್ರಿಲ್ 1 ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಡಾ. ಶಿವಕುಮಾರ ಮಹಾಸ್ವಾಮಿ ಗಳವರ ಭಕ್ತ ವೃಂದದವರು ತಿಳಿಸಿದ್ದಾರೆ.
ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಕಗ್ಗಲಿ ಲಿಂಗಪ್ಪ ಮಾತನಾಡಿ ಶುಕ್ರವಾರದಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಡಾಕ್ಟರ್ ಶಿವಕುಮಾರ ಶ್ರೀಗಳ 115ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ಮತ್ತು ಆಶೀರ್ವಚನವನ್ನು ಶ್ರೀಶೈಲ ಶಾಖಾ ಶ್ರೀ ಶಿವಲಿಂಗೇಶ್ವರ ಬ್ರಹನ್ಮಠ ಕೋಣಂದೂರಿನ ಶ್ರೀ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನೀಡಲಿದ್ದಾರೆ.
ಈ ಸಮಾರಂಭದಲ್ಲಿ ಸಮಾಜ ಸೇವಕರಾದ ಹೆಚ್. ಎಲ್.ಚಂದ್ರಶೇಖರ್. ಅಂತರಾಷ್ಟ್ರೀಯ ಯೋಗ ಪಟು ಕುಮಾರಿ ಕಾವ್ಯ ಕೆ. ಎನ್. ರವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದ ಅವರು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ ಕೊಡಬೇಕಾಗಿ ಈ ಸಂದರ್ಭದಲ್ಲಿ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ. ಆಸೀಫ಼್ ಭಾಷಾಸಾಬ್. ಜನಜಾಗೃತಿ ವೇದಿಕೆ ಅಧ್ಯಕ್ಷ ಟಿ. ಆರ್.ಕೃಷ್ಣಪ್ಪ. ಬಸಪ್ಪ ಬಿ. ಹೆಚ್, ಜಂಬಳ್ಳಿ ಸದಾನಂದ ,ಶಾಂತಕುಮಾರ್,ಸತೀಶ್ ಹೆಗಡೆ, ಧರ್ಮರಾಜ್. ಕೊಳವಳ್ಳಿ ರಮೇಶ್ , ದೂನ ಸೋಮಶೇಖರ್ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್