ರಿಪ್ಪನ್ ಪೇಟೆ ಸುತ್ತಮುತ್ತ ತಪ್ಪದ ಕಾಡಾನೆ ಉಪಟಳ : ಮತ್ತೆ ಮತ್ತೆ ದಾಳಿ ಮಾಡಿ ರೈತರನ್ನು ಕಂಗೆಡಿಸಿರುವ ಕಾಡಾನೆಗಳು

ರಿಪ್ಪನ್‌ಪೇಟೆ: ಕಳೆದ ಕೆಲವು ತಿಂಗಳುಗಳಿಂದ ಹೆದ್ದಾರಿಪುರ, ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲಭಾಗದಲ್ಲಿ ತೋಟಗಳಿಗೆ ದಾಳಿಯಿಟ್ಟು ಜನರಿಗೆ ನಿದ್ರೆಗೆಡಿಸಿದ್ದ ಕಾಡಾನೆಗಳು ಈಗ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಉಪಟಳ ನೀಡುತ್ತಿವೆ.

ಸೋಮವಾರ ರಾತ್ರಿ ನರ‍್ಲಿಗೆಯ ರೈತರೊಬ್ಬರ ಬಾಳೆ ತೋಟದಲ್ಲಿ ಪ್ರತ್ಯಕ್ಷವಾದ ಕಾಡಾನೆ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವಾಹನದತ್ತ ಕಾಡಾನೆ ಧಾವಿಸಿದ್ದು, ಸಿಬ್ಬಂದಿಗಳು ಬೆದರು ಗುಂಡುಗಳನ್ನು ಹಾರಿಸುವ  ಮೂಲಕ ಆನೆಯನ್ನು ಓಡಿಸಿದ್ದಾರೆ. ಬೆದರಿಸಿರುವ ಕಾರಣದಿಂದ ಮುಂದೆ ಸಾಗಿ ಚಾಣಬೈಲು ಗ್ರಾಮದ ದಿನೇಶ್‌ರವರ ತೋಟಕ್ಕೆ ದಾಳಿಯಿಟ್ಟು ಹಲವು ಬಾಳೆ ಮರಗಳನ್ನು ಹಾನಿಗೊಳಿಸಿದೆ. ನಂತರ ಬೆಳಗಿನ ಜಾವ ಹಿರೇಸಾನಿಯ ಗಿಡ್ಡಪ್ಪ ಎಂಬ ರೈತರ ಬಾಳೆ ತೋಟಕ್ಕೆ ನುಗ್ಗಿದೆ. ಆನೆ ಬಂದಿರುವುದನ್ನು ಗಮನಿಸಿ ರೈತ ನೆರೆಹೊರೆಯವರನ್ನು ಕರೆದು ಬೆದರಿಸಿ ಓಡಿಸಿದ್ದಾರೆ.


ಮಂಗಳವಾರ ಬೆಳಿಗ್ಗೆ ಹಿರೇಸಾನಿ ಕಾಡಿನಲ್ಲಿರುವ ಮಾಹಿತಿ ಅರಿತ ಅರಣ್ಯ ಇಲಾಖಾ ಸಿಬ್ಬಂದಿಗಳ ತಂಡ ಕಾರ್ಯಪ್ರವೃತ್ತರಾಗಿ ಕೆಲದೂರ ಆನೆಯನ್ನು ಓಡಿಸುವಲ್ಲಿ ಸಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾಡಾನೆಯನ್ನು ಓಡಿಸಲು ಅರಣ್ಯ ಇಲಾಖೆ ಕ್ರಮಕೈಗೊಂಡಿದ್ದು, ಸಕ್ರೆಬೈಲಿನಿಂದ ಮೂರು ಸಾಕಿದ ಆನೆಗಳನ್ನು ತರಿಸಿಕೊಂಡು ಹಗಲು ರಾತ್ರಿ ಸಿಬ್ಬಂದಿಗಳು ಕಾಡಾನೆಗಳಿಗಾಗಿ ಹೊಂಚುಹಾಕಿ ಕಾಡಿನಲ್ಲಿಯೇ ಕಾದುಕುಳಿತಿದ್ದಾರೆ. ಕಾಡಾನೆಗಳು ಮಾತ್ರ ರಾತ್ರಿ ಸಮಯದಲ್ಲಿ ಕಾಣಿಸಿಕೊಂಡು ಹಗಲಿನಲ್ಲಿ ಇರುವಿಕೆಯ ಸುಳಿವನ್ನು ಬಿಟ್ಟುಕೊಡದೆ ಕಾಡಾನೆ ಮತ್ತು ಅರಣ್ಯ ಇಲಾಖೆಯವರ ನಡುವೆ ಕಣ್ಣಾಮುಚ್ಚಾಲೆ ಆಟ ಮುಂದುವರೆದಿದೆ.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

9 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

9 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

11 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago