ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು.
ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ, ಯೋಜನಾ ಮತ್ತು ಯೋಜನೇತರ ವೆಚ್ಚ, ಸಂಪನ್ಮೂಲ ಕ್ರೋಢೀಕರಣ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದೇವರಾಜ್.ಆರ್, ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರವೀಶ್.ಎನ್.ಎಸ್ ಮತ್ತು ಸಹಾಯಕ ಪ್ರಾಧ್ಯಾಪಕರಾದ ಕಿರಣ್ ತಿಮ್ಮಪ್ಪ ತೆಲುಗಾರ್, ಚಿರಂಜೀವಿ.ವಿ.ಬಿ ,ಶಿಲ್ಪಾ ಪಾಟೀಲ್,ಶಂಕರ್.ಎಂ, ರಾಕೇಶ್.ಸಿ, ವೀರನಗೌಡ ಹುಡೇದ್, ಶ್ರೀಹರಿ.ಎಸ್.ವಿ, ಆಯಿಶಾ ಸೇರಿದಂತೆ ಹಲವು ಪ್ರಾಧ್ಯಾಪಕರುಗಳು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್