ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ

ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ ಪಡೆದುಕೊಳ್ಳುವುದು ಹೇಗೆ ಸಾಧ್ಯ? 

ಹೌದು ಇಂತಹದೊಂದು ಅಶಿಸ್ತಿನ ವಾತಾವರಣವು ಹೊಸನಗರ ತಾಲ್ಲೂಕಿನಲ್ಲಿದೆ. ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ಕೆಜಿ, ಯುಕೆಜಿ ಸೇರಿದಂತೆ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಒಟ್ಟಾರೆ ನಾಲ್ಕು ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಈ ಶಾಲೆಯಲ್ಲಿ ಆರು ಖಾಯಂ ಒಬ್ಬರು ನಿಯೋಜಿತರು, ನಾಲ್ಕು ಜನ ಅತಿಥಿ ಶಿಕ್ಷಕರು ಹಾಗೂ ನಾಲ್ಕು ಜನ ಗೌರವ ಶಿಕ್ಷಕರು ಸೇರಿದಂತೆ ಒಟ್ಟು ಹದಿನೈದು ಶಿಕ್ಷಕರಿದ್ದಾರೆ. ಗೌರವ ಶಿಕ್ಷಕರಿಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಶಾಲೆಯ ಎಸ್ಡಿಎಂಸಿ ಸಮಿತಿ ವತಿಯಿಂದ ನೇಮಕ ಮಾಡಲಾಗಿದೆ.

ಅದೇನೇ ಇರಲಿ ಈ ಶಾಲೆಯ ಹಿಂದಿ ಭಾಷೆಗೆ ಸಂಬಂಧಿಸಿದ ಶಿಕ್ಷಕರ ವರ್ತನೆಗೆ ಇಲ್ಲಿನ ಕೆಲವು ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಎಸ್ಡಿಎಂಸಿ ಸಮಿತಿಯ ಅಧ್ಯಕ್ಷರಾದಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಯೂ ಕೂಡ ಬೇಸತ್ತು ಹೋಗಿದ್ದಾರೆ. ಬಲ್ಲ ಮೂಲಗಳ ಪ್ರಕಾರ ಈ ಶಿಕ್ಷಕರು ಪ್ರತಿನಿತ್ಯ ಹೊಸನಗರ ತಾಲ್ಲೂಕಿನ ರಿಪ್ಪನಪೇಟೆಯಿಂದ ಪ್ರಯಾಣ ಮಾಡುತ್ತಿದ್ದು, ಇವರು ಪ್ರತಿದಿನ ಬೆಳಗ್ಗೆ ಶಾಲೆಗೆ ಅರ್ಧ ಮುಕ್ಕಾಲು ಗಂಟೆ ತಡವಾಗಿ ಆಗಮಿಸುತ್ತಿದ್ದಾರೆ. ಎಂಬ ದೂರು ಪೋಷಕರಿಂದ, ಎಸ್ಡಿಎಂಸಿ ಸಮಿತಿ ವತಿಯಿಂದ, ಪೋಷಕರಿಂದ ಬರುತ್ತಿದ್ದು, ಇವರ ಈ ನಡೆತೆಗೆ ನೊಂದ ಈ ಶಾಲೆಯ ಶಿಕ್ಷಕರಾಧಿಯಾಗಿ ಅನೇಕರು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇವರ ಬದಲಾವಣೆಗೆ ಮನವಿ ಮಾಡಿದ್ದಾರೆ.

ಸರ್ಕಾರದ ನಿಯಮಾನುಸಾರ ಯಾವುದೇ ಸರ್ಕಾರಿ ನೌಕರರು ತಾವು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಾನದ ಆಸುಪಾಸಿನಲ್ಲಿಯೇ ಇರಬೇಕು ಎಂಬ ನಿಯಮವಿದೆ. ಆದರೆ ಹೊಸನಗರದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಹಿಂದಿ ಭಾಷೆಗೆ ಸಂಬಂಧಿಸಿದ ಶಿಕ್ಷಕರು ಹೊಸನಗರದಿಂದ ಇಪ್ಪತ್ತೆಂಟು ಕಿಲೋ ಮೀಟರ್ ದೂರದಲ್ಲಿರುವ ರಿಪ್ಪನಪೇಟೆಯಿಂದ ಶಾಲೆಗೆ ಬರುವುದು ಹೋಗುವುದು ಮಾಡುತ್ತಿದ್ದಾರೆ. ಸರಿ ಸುಮಾರು ಅರವತ್ತೈದರಿಂದ ಎಪ್ಪತ್ತು ಕಿಲೋ ಮೀಟರ್ ದೂರದಲ್ಲಿರುವ ಶಿವಮೊಗ್ಗದಿಂದ ಆಗಮಿಸುವ ಶಿಕ್ಷಕರು ಅಥವಾ ಇನ್ಯಾವುದೋ ಹುದ್ದೆಗಳನ್ನು ಅಲಂಕರಿಸಿದ ಸರ್ಕಾರಿ ನೌಕರರು ತಮ್ಮ ತಮ್ಮ ಇಲಾಖೆಯ ಸಮಯಕ್ಕೆ ಸರಿಯಾಗಿ ಆಗಮಿಸುತ್ತಿರುವಾಗ, ಹತ್ತಿರದಲ್ಲೇ ಇರುವ ರಿಪ್ಪನಪೇಟೆಯಿಂದ ಪ್ರಯಾಣ ಮಾಡುವ ಇವರು ಶಾಲೆಯ ಸಮಯಕ್ಕೆ ಸರಿಯಾಗಿ ಬರದೇ ಶಾಲೆಯ ಗಂಟೆ ಹೊಡೆದು, ರಾಷ್ಟ್ರಗೀತೆ, ಪ್ರಾರ್ಥನೆಯಲ್ಲಾ ಮುಗಿದ ನಂತರ ಆಗಮಿಸುವುದು ಎಂದರೆ ಯಾವ ರೀತಿಯ ನ್ಯಾಯ.

ಒಂದೆಡೆ ರಾಜ್ಯಾದ್ಯಂತ ಖಾಸಗಿ ವಿದ್ಯಾಸಂಸ್ಥೆಗಳ ಆರ್ಭಟದಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತದಲ್ಲಿದ್ದರೆ, ಇಲ್ಲಿನ ಎಸ್ಡಿಎಂಸಿ ಸಮಿತಿ ವತಿಯಿಂದ ವಿದ್ಯಾರ್ಥಿಗಳನ್ನು ಉಳಿಸಿಕೊಂಡು ಅವರಿಗೆ ಉತ್ತಮ ಶಿಕ್ಷಣ ನೀಡಲು ಮುಂದಾದರೆ, ಶಾಲೆಯ ಶಿಸ್ತನ್ನು ಕಾಪಾಡುವ ಹೊಣೆ ಹೊತ್ತ ಶಿಕ್ಷಕರೇ ಅಶಿಸ್ತಿನಿಂದ ವರ್ತಿಸಿದರೆ ಇನ್ನೂ ವಿದ್ಯಾರ್ಥಿಗಳ ಪಾಡೇನು ಎಂದು ಪೋಷಕರು, ಈ ಶಾಲೆಯ ಹಲವು ಶಿಕ್ಷಕರು, ಎಸ್ಡಿಎಂಸಿ ಸಮಿತಿಯ ಅಧ್ಯಕ್ಷರು ಸದಸ್ಯರು ಚಿಂತನೆ ನಡೆಸಿದ್ದಾರೆ.


ವರದಿ:- ಪುಷ್ಪಾ ಜಾಧವ್

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago