Headlines

ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು, ಸ್ವಾಗತಕ್ಕೆ ಸಜ್ಜಾದ ಹೊಳಲೂರು ಗ್ರಾಮ

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಭೇಟಿ ನೀಡಲಿರುವ ಕಾರ್ಯಕ್ರಮದ ಅಂಗವಾಗಿ ಇಂದು ಹಿರಿಯ ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ.

ನವದೆಹಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಆಯುಕ್ತರಾದ ಶಿಲ್ಪಾ ಶರ್ಮಾ ಇಂದು ಹೊಳಲೂರು ಗ್ರಾಮದ ಸ್ಪಚ್ಚ ಸಂಕೀರ್ಣ ಘಟಕ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿ, ಗ್ರಾಮ ಪಂಚಾಯಿತಿ , ಸ್ಪ ಸಹಾಯ ಸಂಘಗಳ ವಾಣಿಜ್ಯ ಮಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಧಾನಿ ಕಾರ್ಯಕ್ರಮದ ಅಂಗವಾಗಿ ಹೊಳಲೂರು ಸಜ್ಜಾಗುತಿದ್ದು, ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.

Leave a Reply

Your email address will not be published. Required fields are marked *