ಹರ್ಷನ ಕೊಲೆ ಪ್ರಕರಣವನ್ನ ಇನ್ನೊಂದು ವಾರದೊಳಗೆ ಎನ್ಐಎ ತನಿಖಾ ತಂಡಕ್ಕೆ ಒಪ್ಪಿಸಲಾಗುವುದು ಎಂದು ಕೃಷಿ ಮತ್ತು ರೈತರ ಕಲ್ಯಾಣ ಕೇಂದ್ರ ಮಂತ್ರಿ ಶೋಭ ಕರದ್ಲಾಂಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಶಿವಮೊಗ್ಗದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳಿಗೆ ಮಾತನಾಡಿ ಹರ್ಷನ ಸಾವು ಕೇವಲ ಕುಟುಂಬಕ್ಕೆ ದುಖ ತಂದಿಲ್ಲ ಬದಲಿಗೆ ಇಡೀ ದೇಶಕ್ಕೆ ನೋವುತಂದಿದೆ ಎಂದರು.
ಹರ್ಷನ ಸಾವಿನ ಹಿಂದೆ ಅಂತರಾಷ್ಟ್ರೀಯ ಷಡ್ಯಂತರ ಅಡಗಿದೆ ಎಂಬ ಶಂಕೆ ಇದೆ. ಈ ಹೇಳಿಕೆಯನ್ನ ಹರ್ಷ ಕೊಲೆಯಾದ ಮೊದಲನೇ ದಿನವೇ ಹೇಳಿದ್ದೆ. ಆತನ ಕೊಲೆಯ ಹಿಂದೆ ದೊಡ್ಡ ದೊಡ್ಡ ಸಂಘಟನೆಗಳ ಕೈವಾಡದ ಶಂಕೆಯಿದೆ ಎಂದು ಹೇಳಿದ್ದೆ.
ಕೇಂದ್ರ ಸರ್ಕಾರ ಈ ಪ್ರಕರಣವನ್ನ ಎನ್ಐಎಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದೆ. ಹಾಗಾಗಿ ಒಂದು ವಾರದೊಳಗೆ ಎನ್ಐಎಗೆ ಈ ಪ್ರಕರಣ ಹಸ್ತಾಂತರಗೊಳ್ಳುವ ನಿರೀಕ್ಷೆ ಇದೆ ಎಂದರು.
ಹರ್ಷನ ಕೊಲೆ ಮಾಡಿರುವುದನ್ನ ನೋಡಿದರೆ ತಾಲಿಬಾನ್ ನ ಸಂಸ್ಕೃತಿ ಎದ್ದುತೋರುತ್ತದೆ. ಕೊಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತಾರೆ ಎಂದರೆ ಅವರ ಮಾನಸಿಕತೆ ಎಷ್ಟಿದೆ ಎಂದು ತಿಳಿದುಬರುತ್ತದೆ. ಇದು ಒಂದು ಮನೆಯ ಸಮಸ್ಯೆಯಲ್ಲ. ಈ ಸಮಸ್ಯೆ ಇಡೀ ಹಿಂದೂ ಸಮಾಜದ ಸಮಸ್ಯೆ ಆಗಿದೆ. 25 ರಿಂದ 30 ಹಿಂದೂ ಕಾರ್ಯಕರ್ತರನ್ನ ಸಮಾಜ ಕಳೆದುಕೊಂಡಿದೆ. ಇವರ ಅಟ್ಟಹಾಸವನ್ನ ತಡೆಯಬೇಕಿದೆ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್