ಶಿವಮೊಗ್ಗದ ಮೊದಲ ಎಫ್.ಎಂ ರೇಡಿಯೋ ಆರಂಭ; ಉತ್ತಮ ಸ್ಪಂದನೆ

ದಶಕದಿಂದ ಮಲೆನಾಡಿಗೊಂದು ಎಫ್.ಎಂ. ರೇಡಿಯೋ ಬೇಕು ಎಂಬ ಬೇಡಿಕೆ ಇತ್ತು. ಜನರ ಬೇಡಿಕೆ ತಣಿಸುವ ಸಲುವಾಗಿ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಕೊಡುಗೆಯಾಗಿ ಸಿಕ್ಕಿದೆ. ಸದ್ಯ ಎಫ್.ಎಂ. ರೇಡಿಯೋ ಟೆಸ್ಟಿಂಗ್ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡುವ ಸಾಧ್ಯತೆ ಇದೆ.
ಕೊಡಚಾದ್ರಿ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಸೊಸೈಟಿ ಎಂಬ ಸರ್ಕಾರೇತರ ಸಂಸ್ಥೆ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಆರಂಭಿಸಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಈ ರೇಡಿಯೋಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈಗ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳನ್ನು ಪ್ರಾಯೋಗಿಕವಾಗಿ ಪ್ರಸಾರ ಮಾಡಲಾಗುತ್ತಿದೆ.
ನವುಲೆ ಕೃಷಿ ವಿಶ್ವವಿದ್ಯಾಲಯದ ಮುಂಭಾಗ ಇರುವ ರತ್ನಾಕರ ನಗರದಲ್ಲಿ ಎಫ್.ಎಂ. ರೇಡಿಯೋ ಶಿವಮೊಗ್ಗವನ್ನು ಸ್ಥಾಪಿಸಲಾಗಿದೆ. ಎರಡು ಹೈಟೆಕ್ ಸ್ಟುಡಿಯೋ, ಒಂದು ಕಂಟ್ರೋಲ್ ರೂಂ, ಡೆಸ್ಕ್ ಸ್ಥಾಪಿಸಲಾಗಿದೆ. ಹೊರಾಂಗಣದಲ್ಲಿ ಕಾರ್ಯಕ್ರಮ ರೆಕಾರ್ಡ್ ಮಾಡಲು ಹೈಟೆಕ್ ರೆಕಾರ್ಡಿಂಗ್ ಮೈಕ್‌ಗಳನ್ನು ಕೂಡ ವ್ಯವಸ್ಥೆ ಮಾಡಲಾಗಿದೆ.
ಕೆಲವು ಅನುಭವಿ ಮತ್ತು ಹಿರಿಯರು ರೇಡಿಯೋ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 13 ಮಂದಿಗೆ ತರಬೇತಿ ನೀಡಲಾಗುತ್ತಿದೆ. ಅವರಿಗೆ ಕಾರ್ಯಕ್ರಮ ನಿರೂಪಣೆ, ಸ್ಕ್ರಿಪ್ಟ್, ತಾಂತ್ರಿಕ ಕೌಶಲ್ಯ ಎಲ್ಲವನ್ನೂ ಕಲಿಸಲಾಗುತ್ತಿದೆ. ವಿಶೇಷ ಭತ್ಯೆ ಜೊತೆಗೆ ಕೆಲಸ ಕಲಿಸಿಕೊಡಲಾಗಿದ್ದು, ಉತ್ತಮ ಅಭ್ಯರ್ಥಿಗಳಿಗೆ ಉದ್ಯೋಗ ಕೊಡುವ ಭರವಸೆ ನೀಡಲಾಗಿದೆ.
ರೇಡಿಯೋ ಶಿವಮೊಗ್ಗ ಉಳಿದ ಎಫ್.ಎಂಗಳ ಹಾಗಲ್ಲ. ಮೌಲ್ಯಯುತ ಹಾಗೂ ಗುಣಮಟ್ಟದ ಶಿಕ್ಷಣ, ಪರಿಸರ, ಕಲೆ, ಸಂಸ್ಕೃತಿ, ಸಾಹಿತ್ಯ, ಸರಕಾರಿ ಯೋಜನೆಗಳು, ರೈತರು, ಕಾರ್ಮಿಕರು, ಆಹಾರ, ಸಾವಯವ ಕೃಷಿ ಸೇರಿದಂತೆ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.
ರೇಡಿಯೋ ಶಿವಮೊಗ್ಗ, ಸರ್ಕಾರದ ರೇಡಿಯೋ ಆಗಿದ್ದು, ಖಾಸಗಿ ಎಫ್.ಎಂ. ರೇಡಿಯೋಗಿಂತಲೂ ಭಿನ್ನ. ಇದು ಸಮುದಾಯ ರೇಡಿಯೋ. ಸೀಮಿತ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡುತ್ತದೆ. ಸ್ಥಳೀಯರನ್ನೇ ಬಳಸಿಕೊಂಡು ಕಾರ್ಯಕ್ರಮ ರೂಪಿಸುವುದು ಇದರ ವಿಶೇಷ. 30ರಿಂದ 40 ಕಿ.ಮೀ ವ್ಯಾಪ್ತಿಯಲ್ಲಿ ಇದರ ಕಾರ್ಯಾಚರಣೆ ಇರುತ್ತದೆ. ಗುಡ್ಡಗಾಡುಗಳಲ್ಲಿ ಸಿಗ್ನಲ್ ವ್ಯಾಪ್ತಿ ಕಡಿಮೆ ಇರುತ್ತದೆ. ಪ್ರಸ್ತುತ 50 ಗಿಗಾ ಹರ್ಟ್ಸ್ ಸಾಮರ್ಥ್ಯದಲ್ಲಿ ಕೆಲಸ ಆರಂಭಿಸಿದೆ.
ರೇಡಿಯೋ ಶಿವಮೊಗ್ಗ ಎಫ್.ಎಂನ ಕೇಳುಗರ ಸಂಖ್ಯೆ ಹೆಚ್ಚಿಸಲು, ಜಗತ್ತಿನಾದ್ಯಂತ ಎಫ್.ಎಂ ತಲುಪಲು ಸ್ವಂತ APP ಸಿದ್ಧಪಡಿಸಲಾಗಿದೆ. ರೇಡಿಯೋ ಸಿಗ್ನಲ್ ತಲುಪದ ಕಡೆ APP ಡೌನ್‌ಲೋಡ್ ಮಾಡಿಕೊಂಡು ಕಾರ್ಯಕ್ರಮ ಕೇಳಬಹುದು. ಈಗಾಗಲೇ ಸಾವಿರಾರು ಮಂದಿ APP ಮೂಲಕ ರೇಡಿಯೋ ಶಿವಮೊಗ್ಗದ ಕಾರ್ಯಕ್ರಮಗಳನ್ನು ಕೇಳುತ್ತಿದ್ದಾರೆ.
ಪ್ರಾಯೋಗಿಕ ಹಂತದಲ್ಲೇ ರೇಡಿಯೋ ಶಿವಮೊಗ್ಗ 32 ಸಾವಿರ ಕೇಳುಗರನ್ನು ತಲುಪಿದೆ. ಶಿಕ್ಷಣ, ಪರೀಕ್ಷೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳು, ಉಪನ್ಯಾಸಕರು ಸೇರಿ 32 ಸಾವಿರ ಕೇಳುಗರನ್ನು ತಲುಪಿದೆ. ಉತ್ತಮ ಪ್ರತಿಕ್ರಿಯೆ ಲಭಿಸಿದೆ.
ಏಳೆಂಟು ವರ್ಷದ ಪ್ರಯತ್ನದ ಬಳಿಕ ನಮ್ಮ ಎನ್‌ಜಿಒಗೆ ರೇಡಿಯೋ ಆರಂಭಿಸಲು ಅನುಮತಿ ಸಿಕ್ಕಿದೆ. ಉತ್ತಮ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಸಹಕಾರಿ ಆಗುವ ಯೋಜನೆ ರೂಪಿಸಲಾಗಿದೆ. ದೇಶದಲ್ಲಿ 240 ಸಮುದಾಯ ರೇಡಿಯೋಗಳಿವೆ. ರಾಜ್ಯದಲ್ಲಿ 8-10 ಸಮುದಾಯ ರೇಡಿಯೋಗಳು ಸಕ್ರಿಯವಾಗಿವೆ. ಆರಂಭದಲ್ಲಿ 40 ಲಕ್ಷ ಖರ್ಚಾಗಿದೆ. ನಮ್ಮ ಎನ್‌ಜಿಒ ಕಾರ್ಯ ಮೆಚ್ಚಿಕೊಂಡು ರೇಡಿಯೋ ಆರಂಭಿಸುವ ಅನುಮತಿ ನೀಡಲಾಗಿದೆ ಎಂದು ಸ್ಟೇಷನ್ ಡೈರೆಕ್ಟರ್ ಜನಾರ್ಧನ್ ತಿಳಿಸಿದರು. ಶಿವಮೊಗ್ಗದಲ್ಲಿ ಎಫ್.ಎಂ. ರೇಡಿಯೋ ಬಗ್ಗೆ ಬಹಳ ನಿರೀಕ್ಷೆ ಇತ್ತು. ಮೊದಲ ರೇಡಿಯೋಗೆ ಉತ್ತಮ ಸ್ಪಂದನೆ ಸಿಗುತ್ತಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

17 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

17 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

18 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

20 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

24 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

1 day ago