POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ರವರ ಹೆಸರಿಡಬೇಕೆಂದು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಮುಖ್ಯಮಂತ್ರಿಗೆ ಮನವಿ…

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಬೇಕೆಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರನ್ನು ನಾಮಕರಣ ಮಾಡುವ ಕುರಿತು ಚರ್ಚೆ ಮಾಡಲಾಯಿತು. 

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೆಂದ್ರ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಡಿ.ಎಸ್. ಅರುಣ್ , ಮಂಜುನಾಥ ಭಂಡಾರಿ ಮೊದಲಾವರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.