ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.
ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ ರಾಜ್ಯದ ಗ್ರಾಮೀಣ ಪ್ರದೇಶದ ಅದರಲ್ಲೂ ಮಲೆನಾಡು ಗ್ರಾಮೀಣ ಭಾಗದ ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಸರಕಾರ ಆಗಲಿ ಯಾವುದೇ ರೀತಿಯ ಸಹಕಾರ ನೀಡಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ಮಾತ್ರ ರಾಜಕಾರಣಿಗಳಿಗೆ ವಿಶ್ವಕರ್ಮ ಸಮಾಜದವರು ನೆನಪಾಗುತ್ತಾರೆ. ನಂತರ ಮರೆತು ಬಿಡುತ್ತಾರೆ. ಆದರೂ ಸಹ ವಿಶ್ವಕರ್ಮ ಸಮಾಜದ ಅನೇಕ ಯುವಕ-ಯುವತಿಯರು ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದಿದ್ದರೂ ಸಹ ಕಠಿಣ ಶ್ರಮ ವಹಿಸಿ ಉತ್ತಮ ಶಿಕ್ಷಣವನ್ನು ಪಡೆದು ಒಳ್ಳೆಯ ಉದ್ಯೋಗಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ.ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಮತ್ತು ಚುನಾಯಿತ ಪ್ರತಿನಿಧಿಗಳು ಸಾವಿರಾರು ವರ್ಷಗಳ ಇತಿಹಾಸವಿರುವ ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು. ಹಾಗೆಯೇ ವಿಶ್ವಕರ್ಮ ಸಮಾಜ ಅಭಿವೃದ್ಧಿಯಾಗಬೇಕಾದರೆ ಸಮಾಜದ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.
ಈಗಾಗಲೇ ಸಂಘದ ವತಿಯಿಂದ ಸಾಗರ ಹಾಗೂ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ರವರನ್ನು ಭೇಟಿಯಾಗಿ ವಿಶ್ವಕರ್ಮ ಸಮಾಜದ ಸಭಾಭವನಕ್ಕೆ ನೆರವು ನೀಡಬೇಕೆಂದು ಕೋರಲಾಗಿದ್ದು. ಅದಕ್ಕೆ ಸ್ಪಂದಿಸಿದ ಅವರು ತಮ್ಮ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಸಭಾ ಭವನ ನಿರ್ಮಾಣಕ್ಕೆ ನಿರ್ಧಾರ:
ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ವತಿಯಿಂದ ನವಟೂರು ರು ಗ್ರಾಮದಲ್ಲಿ 1 ಎಕರೆ ಜಾಗ ಖರೀದಿಸಿದ್ದು ಅದರಲ್ಲಿ ಸಭಾಭವನ ನಿರ್ಮಾಣ ಮಾಡಲು ಸರ್ವ ಸದಸ್ಯರ ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷ ಭಾಸ್ಕರ ಆಚಾರ್.ಗೌರವ ಉಪಾಧ್ಯಕ್ಷ ಪುಟ್ಟ ಚಾರ್.ಕಾರ್ಯದರ್ಶಿ ಪ್ರಕಾಶ್ ಸಹಕಾರ್ಯದರ್ಶಿ ಚಂದ್ರಾಚಾರ್ ಖಜಾಂಚಿ ವಿಶ್ವನಾಥ್ ಆಚಾರ್ ಸೇರಿದಂತೆ ಕೆರಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಸದಸ್ಯರುಗಳು ಭಾಗವಹಿಸಿದ್ದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇