ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.


ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ ಅದರಲ್ಲೂ ಮಲೆನಾಡು ಗ್ರಾಮೀಣ ಭಾಗದ ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಸರಕಾರ ಆಗಲಿ ಯಾವುದೇ ರೀತಿಯ ಸಹಕಾರ ನೀಡಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ಮಾತ್ರ ರಾಜಕಾರಣಿಗಳಿಗೆ ವಿಶ್ವಕರ್ಮ ಸಮಾಜದವರು ನೆನಪಾಗುತ್ತಾರೆ. ನಂತರ ಮರೆತು ಬಿಡುತ್ತಾರೆ. ಆದರೂ ಸಹ ವಿಶ್ವಕರ್ಮ ಸಮಾಜದ    ಅನೇಕ ಯುವಕ-ಯುವತಿಯರು ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದಿದ್ದರೂ ಸಹ ಕಠಿಣ ಶ್ರಮ ವಹಿಸಿ ಉತ್ತಮ ಶಿಕ್ಷಣವನ್ನು ಪಡೆದು ಒಳ್ಳೆಯ ಉದ್ಯೋಗಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ.ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಮತ್ತು ಚುನಾಯಿತ ಪ್ರತಿನಿಧಿಗಳು ಸಾವಿರಾರು ವರ್ಷಗಳ ಇತಿಹಾಸವಿರುವ ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು. ಹಾಗೆಯೇ ವಿಶ್ವಕರ್ಮ ಸಮಾಜ ಅಭಿವೃದ್ಧಿಯಾಗಬೇಕಾದರೆ  ಸಮಾಜದ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದರು.

ಈಗಾಗಲೇ ಸಂಘದ ವತಿಯಿಂದ  ಸಾಗರ ಹಾಗೂ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ರವರನ್ನು ಭೇಟಿಯಾಗಿ ವಿಶ್ವಕರ್ಮ ಸಮಾಜದ ಸಭಾಭವನಕ್ಕೆ ನೆರವು ನೀಡಬೇಕೆಂದು ಕೋರಲಾಗಿದ್ದು. ಅದಕ್ಕೆ ಸ್ಪಂದಿಸಿದ ಅವರು  ತಮ್ಮ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಸಭಾ ಭವನ ನಿರ್ಮಾಣಕ್ಕೆ ನಿರ್ಧಾರ:

ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ವತಿಯಿಂದ ನವಟೂರು ರು ಗ್ರಾಮದಲ್ಲಿ 1 ಎಕರೆ ಜಾಗ ಖರೀದಿಸಿದ್ದು ಅದರಲ್ಲಿ ಸಭಾಭವನ ನಿರ್ಮಾಣ ಮಾಡಲು ಸರ್ವ ಸದಸ್ಯರ ಸಭೆಯಲ್ಲಿ ನಿರ್ಣಯಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಭಾಸ್ಕರ ಆಚಾರ್.ಗೌರವ ಉಪಾಧ್ಯಕ್ಷ ಪುಟ್ಟ ಚಾರ್.ಕಾರ್ಯದರ್ಶಿ ಪ್ರಕಾಶ್ ಸಹಕಾರ್ಯದರ್ಶಿ ಚಂದ್ರಾಚಾರ್ ಖಜಾಂಚಿ ವಿಶ್ವನಾಥ್ ಆಚಾರ್ ಸೇರಿದಂತೆ ಕೆರಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಸದಸ್ಯರುಗಳು ಭಾಗವಹಿಸಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇


ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

2 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago