ಸಚಿವ ಕೆ ಎಸ್ ಈಶ್ವರಪ್ಪ ಸೇರಿದಂತೆ ಇಬ್ಬರ ವಿರುದ್ದ ಎಫ಼್ ಐ ಆರ್ ದಾಖಲಿಸಲು ಕೋರಿ ಕೋರ್ಟ್ ಗೆ ಅರ್ಜಿ :

ಶಿವಮೊಗ್ಗ ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಡೆದ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರು, ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ, ಅವರನ್ನು ದಮನ ಮಾಡುತ್ತೇವೆ ಎಂಬ ಪ್ರಚೋದನಕಾರಿ ಹೇಳಿಕೆಯೇ ಗಲಭೆಗೆ ಮುಖ್ಯ ಕಾರಣವಾಗಿದ್ದರಿಂದ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಶಿವಮೊಗ್ಗ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಬೆಂಗಳೂರು ನಗರದ 40ನೆ ಎಸಿಎಂಎಂ ಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿದೆ.ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಹರ್ಷ ಹತ್ಯೆಯ ನಂತರ ಹೇಳಿಕೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರನ್ನು ನೀಡಲು ಹೋದರೂ ದೂರನ್ನು ಸ್ವೀಕರಿಸಿರುವುದಿಲ್ಲ. ಹಾಗೂ ಸಂಬಂಧಪಟ್ಟ ಅಧಿಕಾರಿಗಳೂ ಎಫ್‍ಐಆರ್ ದಾಖಲಿಸಿಕೊಂಡಿಲ್ಲ ಎಂದು ಅರ್ಜಿದಾರರಾದ ಶಿವಮೊಗ್ಗ ನಗರದ ರಿಯಾಝ್ ಅಹ್ಮದ್ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಕೆ.ಎಸ್.ಈಶ್ವರಪ್ಪ, ಚನ್ನಬಸಪ್ಪ ಅವರ ವಿರುದ್ಧ 124(ಎ), 153(ಎ), 153(ಬಿ), 295(ಎ), 295(ಬಿ), 505(2), ಮತ್ತು 504ಆರ್/ಡಬ್ಲ್ಯೂ ಸೆಕ್ಷನ್ 34 ಆಫ್ ಐಪಿಸಿ ಕಲಂಗಳಡಿ ಪ್ರಕರಣವನ್ನು ದಾಖಲಿಸುವಂತೆ ಹಾಗೂ ಸೂಕ್ತ ತನಿಖೆ ಕೈಗೊಂಡು ಕಾನೂನು ಕ್ರಮ ಜರುಗಿಸಲು ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ರಿಯಾಝ್ ಅವರು ಮಾಡಿದ್ದಾರೆ. ಅರ್ಜಿದಾರರ ಪರವಾಗಿ ವಕೀಲರಾದ ಕಾಶೀನಾಥ್ ಜೆ.ಡಿ. ಅವರು ವಾದಿಸಲಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

8 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

9 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

10 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago