ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ ಸೂಕ್ತ ರೀತಿಯಲ್ಲಿ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸ ಬೇಕು ಎಂದರು.
ನಂತರ ಮಾತನಾಡಿದ ತಾಪಂ ಮಾಜಿ ಸದಸ್ಯರಾದ ಬಿ ಜಿ ಚಂದ್ರಮೌಳಿ ಪ್ರತಿ ವರ್ಷದಂತೆ ಈ ವರ್ಷವೂ ಫೆಬ್ರವರಿ ತಿಂಗಳಿಂದ ಜೂನ್ ತಿಂಗಳವರೆಗೆ ಹೊಸನಗರ ತಾಲ್ಲೂಕಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು ಸಮರ್ಪಕ ವಿದ್ಯುತ್ ನೀಡಬೇಕು ಇಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಮೆಸ್ಕಾಂ ಇಲಾಖೆಯ ವಿರುದ್ದ ಉಗ್ರ ಹೋರಾಟದ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹುಂಚ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗುರುರಾಜ ಸುಣ್ಣಕಲ್ , ಗ್ರಾಮ ಪಂಚಾಯಿತಿ ಸದಸ್ಯ ರಾಜಶೇಖರ ಪಟೇಲ್ , ಹುಂಚ ಘಟಕದ ಉಪಾಧ್ಯಕ್ಷ ಗುರುರಾಜ ಭಂಡಾರಿ, ಸಾಮಾಜಿಕ ಜಾಲತಾಣ ಮುಖ್ಯಸ್ಥ ಉಲ್ಲಾಸ್ ಭಟ್, ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್