ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.
ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ ಹವಾ ಎಬ್ಬಿಸುತ್ತಲೇ ಇರುತ್ತಾರೆ.
ಅಂತೆಯೇ…. ಸಾಗದಲ್ಲೂ ಕೂಡ  ಐಪಿಎಲ್ ಜ್ವರ ಹೆಚ್ಚಾಗಿದೆ. ಇದಕ್ಕೆ ತಾಜಾ ಉದಾಹರಣೆಯಾಗಿದ್ದು,ಸಾಗರದ “ಸದ್ಗುರು ಹೋಟೆಲ್ ಮಾಲೀಕ ಸಂತೋಷ್ ಸದ್ಗುರು” ರವರು. ಸಂತೋಷ್ ಸದ್ಗುರು ರವರು ಒಂದಲ್ಲಾ ಒಂದು ರೀತಿ ವಿನೂತನವಾಗಿ ಆರ್‌ಸಿಬಿ ತಂಡಕ್ಕೆ  ಶುಭಾಶಯ ಏನಾದರೊಂದು ಮಾಡುತ್ತಲೇ ಇರುತ್ತಾರೆ. ಕಳೆದ ವರ್ಷ ಬಜಾಜ್ ಚೇತಕ್ ಬೈಕ್.ಇದೀಗ ಫಿಯೆಟ್ ಕಾರೊಂದನ್ನು ವಿನ್ಯಾಸ ಗೊಳಿಸಿ. ಕ್ರಿಕೆಟ್ ಪ್ರೇಮಿಗಳಿಗೆ ಮಾದರಿಯಾಗಿದ್ದಾರೆ… ಅಲ್ಲದೇ ಫಿಯಟ್ ಕಾರಿನ ಮೇಲೆ  “ಈ ಸಲ ಕಪ್ ನಮ್ದೆ” ಎಂದು ಬರೆಸಿ ಆರ್‌ಸಿಬಿ ಮೇಲೆ ಇರುವ ಪ್ರೀತಿ ತೋರಿಸಿದ್ದಾರೆ.
ಅಷ್ಟೇ ಅಲ್ಲದೆ ಕನ್ನಡ ಚಿತ್ರ ರಂಗದ “ನಟರಾದ ಶಂಕರ್ ನಾಗ್. ಪುನಿತ್ ರಾಜ್ ಕುಮಾರ್. ಡಾ. ರಾಜ್ ಕುಮಾರ್. ವಿಷ್ಣುವರ್ಧನ್ ರವರ” ಭಾವಚಿತ್ರಗಳನ್ನು ಕೂಡ ಅಂಟಿಸಿ ಕನ್ನಡ ಪ್ರೇಮವನ್ನು ಎತ್ತಿ ತೋರಿಸಿದ್ದಾರೆ.ಅಂದ ಹಾಗೆ ಸಂತೋಷ್ ಸದ್ಗುರು ರವರು ವಿನ್ಯಾಸ ಗೊಳಿಸಿದ ಫಿಯಟ್ ಕಾರನ್ನು  ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ “ಕನ್ನಡತಿ” ಧಾರಾವಾಹಿಯ ನಾಯಕಿ ನಟಿ ” ರಜಿನಿ ರಾಘವನ್” ರವರು ಸಾರ್ವಜನಿಕ ಪ್ರದರ್ಶನಕ್ಕಾಗಿ ಕಾರಿನ ಪರದೆ ಸರಿಸುವ ಮೂಲಕ ಚಾಲನೆ ನೀಡಿದರು.
ವಿನೂತನ ಕಾರಿನ ಮುಂದೆ ಸೆಲ್ಫಿ ಗಾಗಿ ಮುಗಿ ಬೀಳುತ್ತಿದ್ದಾರೆ. ನಂತರ ಮಾಧ್ಯಮದವರೊಂದಿಗೆ  ಆರ್‌ಸಿಬಿ ಮತ್ತು ಕನ್ನಡ ಪ್ರೇಮಿ ಸಂತೋಷ್ ಸದ್ಗುರು ಮಾತನಾಡಿ ಈ ಬಾರಿ ಆರ್‌ಸಿಬಿ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದ್ದು, ಈ ಸಲ ಕಪ್ ಗೆದ್ದು ಗೆಲ್ಲುತ್ತದೆ.ಆರ್‌ಸಿಬಿ ಅಭಿಮಾನಿಗಳು ತಮ್ಮ ಪ್ರತಿಯೊಂದು ಪೋಸ್ಟ್‌ನಲ್ಲೂ ‘ಈ ಸಲ ಕಮ್ ನಮ್ದೆ’ ಎಂಬುದನ್ನು ಉಲ್ಲೇಖಿಸುತ್ತಿದ್ದಾರೆ. ಇದು ಕಪ್ ಗೆಲ್ಲಲು RCB ಗೆ ಮತ್ತಷ್ಟು ಹುರಿದುಂಬಿಸಲಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಜಗತ್ತಿನಾದ್ಯಂತ ಕೋಟ್ಯಾಂತರ ಅಭಿಮಾನಿಗಳಿದ್ದಾರೆ.ಎರಡನೇ ಬಾರಿ ಕಪ್‌ ಗೆಲ್ಲದಿದ್ದರೂ ಆರ್‌ಸಿಬಿ ಮೇಲಿನ ಅಭಿಮಾನ ಫ್ಯಾನ್ಸ್‌ಗಳಲ್ಲಿ ಎಳ್ಳಷ್ಟೂ ಕಡಿಮೆಯಾಗಿಲ್ಲ.ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡುವ ತಂಡವೆಂದರೆ ಅದು ಬೆಂಗಳೂರು ಮೂಲದ ಫ್ರಾಂಚೈಸಿಯಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು. ಆರ್‌ಸಿಬಿ ಕಪ್‌ ಗೆಲ್ಲಲಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದರು.
ಮಾಹಿತಿ ಕೃಪೆ : ಮಲೆನಾಡ ರಹಸ್ಯ..!
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

8 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

8 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

8 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

13 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

15 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago