ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :

ಜೀವರಕ್ಷಣೆಗೆ  ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ  ಸಂಗಮ್ ಹೇಳಿದರು

ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ  ಜಿ.ಎ.ನಾರಿಬೋಲಿ ಮಹಾವಿದ್ಯಾಲಯ ,  ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು…
ರಕ್ತ ಮನುಷ್ಯನಿಗೆ ಅತ್ಯಂತ ಅಗತ್ಯ ವಸ್ತು ಅಪಘಾತ ಹಾಗೂ ಇನ್ನಿತರ ತುರ್ತು ಪರಿಸ್ಥಿತಿಗಳಲ್ಲಿ ರಕ್ತ ಸಿಗದೆ ಸಾಕಷ್ಟು ಜನ ಮೃತ ಪಡುತ್ತಿದ್ದಾರೆ ಇಂತಹ ಅಸಹಾಯಕರಿಗೆ ರಕ್ತ ಸಂಗ್ರಹಿಸಿ ಕೊಡಬೇಕಾದುದು ಪ್ರತಿಯೊಬ್ಬರ ಕರ್ತವ್ಯ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸತೀಶ್ ಹೇಳಿದರು

ರಕ್ತದಾನದಿಂದ ಅದೆಷ್ಟೋ ಜೀವವನ್ನು ಉಳಿಸಬಹುದು ಸದೃಢ ವ್ಯಕ್ತಿ ರಕ್ತವನ್ನು ದಾನ ಮಾಡಿದರೆ ಅಷ್ಟೆ ಅಂಶದಷ್ಟು ಹೊಸರಕ್ತವು 2ತಿಂಗಳೊಳಗೆ ತುಂಬುವ ಮೂಲಕ ಇನ್ನಷ್ಟು ಚೈತನ್ಯ ಉತ್ಸಾಹ ಬರುತ್ತದೆ ಎಂದು ನಾಗರಾಜ್  ಹೇಳಿದರು

ಶಿಬಿರದಲ್ಲಿ 111 ಯೂನಿಟ್ ರಕ್ತ ಸಂಗ್ರಹವಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಲಕ್ಷ್ಮೀಶ ಎ.ಎಸ್. ಅಧ್ಯಕ್ಷತೆ ವಹಿಸಿದ್ದರು. ಮ.ಪ್ರ.ಅ.ದ ಸಹಾ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ್ ಬಿ ಎಂ, ಶ್ರೀ ಗಿರೀಶ್ ಕೋವಿ ಹಾಗೂ ನಿರ್ದೇಶಕರದ ಶ್ರೀ ಈಳಿ ಶ್ರೀಧರ, ಸ್ನಾತಕೋತ್ತರ ಪದವಿಯ ನಿರ್ದೇಶಕರಾದ ಡಾ. ಸುಮುಖ ಪಿ ಎಸ್ ,ಉಪನ್ಯಾಸಕರಾ ದಯಾನಂದ್ ಸಿ ನಾಯ್ಕ್, ನೂತನ್ ,ವಿನಾಯಕ್,ವಿಷ್ಣುಶರ್ಮ,ವಿನಯ್ ಉಪಸ್ಥಿತರಿದ್ದರು.



ವರದಿ : ಸೂರಜ್ ನಾಯರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

10 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

10 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

10 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

15 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

17 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago