ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು.
ನಂತರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಪೋಷಕರನ್ನು ಮಾತನಾಡಿಸಿದ್ದಾರೆ. ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ.
ಇಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.