ರಿಪ್ಪನ್ಪೇಟೆ: ಮಹಿಳೆಯರಿಗೂ ಸಮಾಜದಲ್ಲಿ ಗೌರವಾಧಾರಗಳಿದ್ದು, ಅಂಜಿಕೊಳ್ಳುವುದನ್ನು ಬಿಟ್ಟು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮಸ್ಯೆಗಳಿಗೆ ಸಾವು ಪರಿಹಾರವೂ ಅಲ್ಲ ಸಾಧನೆಯೂ ಅಲ್ಲ. ಸಂಕಷ್ಟಗಳನ್ನು ಎದುರಿಸಿ ಬದುಕಬೇಕು ಎಂದು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ರಮ್ಯಾ ಹೇಳಿದರು.
ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕಸ್ತೂರಿ ಮಹಿಳಾ ಬಳಗ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ ಒಳ್ಳೆಯ ಶಿಕ್ಷಣ ಮಹಿಳೆಯ ಜೀವನವನ್ನು ಕಾಪಾಡುತ್ತದೆ. ಬಂಗಾರ, ಹಣ, ಬಾಂಡ್ ಮಾಡಿಸುವುದಕ್ಕಿಂತ ಉತ್ತಮ ಶಿಕ್ಷಣ ನೀಡಿದರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಮಹಿಳೆಯರು ಗುರಿಯಡೆಗೆ ಸಾಗುವಾಗ ಇತರರು ಕಾಲೆಳೆಯುವುದು ಸಹಜ. ಅದನ್ನು ಮೆಟ್ಟಿನಿಂತು ಗುರಿಯನ್ನು ಸಾಧಿಸಬೇಕು. ಹೆಣ್ಣು ಅಡಿಗೆಗೆ ಮಾತ್ರ ಸೀಮಿವೆಂಬ ಕೀಳರಿಮೆಯನ್ನು ತೊರೆದು ಸಮಾಜದಲ್ಲಿರುವ ಅವಕಾಶಗಳನ್ನು ಸದ್ಬಳಕೆಮಾಡಿಕೊಂಡು ಯಶಗಳಿಸಬೇಕು ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಧನಲಕ್ಷ್ಮೀ, ಅಶ್ವಿನಿ, ವೇದಾವತಿ, ಮುಖಂಡರಾದ ಆರ್.ಡಿ. ಶೀಲಾ, ಸಾಜೀದಾ, ಸೀಮಾ, ಸರಸ್ವತಿ, ಗಾಯಿತ್ರಿ, ಶಾಲಿನಿ, ಶೈಲಾಪ್ರಭು, ಅಂಬಿಕಾ, ಪೊಲೀಸ್ ಪೇದೆ ಗೌರಿ ಇನ್ನಿತರರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್