ಹಾರಂಬಳ್ಳಿ ಗ್ರಾಮದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಶಿಬಿರ :

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆಳೆಯುತ್ತಿರುವ ಯುವಸಮೂಹ  ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮಾನಸಿಕ ನೆಮ್ಮದಿ ಪಡೆದು ಕೊಳ್ಳುವುದರ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಅಂತಾಗುತ್ತದೆ ಎಂದು ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ್ ಹೇಳಿದರು.

ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಎನ್ಎಸ್ಎಸ್ ಘಟಕದಿಂದ ಹಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಒಂದು ವಾರದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಜಾತಿ ಮತ ಪಂಥಗಳ ಬೇಧವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ಸೇವೆಯನ್ನು ಮಾಡೋಣ ಎಂಬ ಸದುದ್ದೇಶದಿಂದ ಸ್ಥಾಪಿತವಾದ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಅದರಲ್ಲೂ ಯುವಸಮೂಹದಲ್ಲಿ  ಸಮಾಜಸೇವೆಯ ಚಿಂತನೆಗಳನ್ನು ಮೂಡಿಸುತ್ತಿದೆ. ಯುವ ಸಮೂಹ ಸಮಾಜ ಸೇವೆಯಲ್ಲಿ ತೊಡಗಿಕೊಂಡರೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ  ಹೆದ್ದಾರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ ಗಂಗಾಧರ್ ಮಾತನಾಡಿ  ಸಮಾಜದ ನಿರ್ಮಾಣದಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿ ಯುವ ಸಮೂಹದ ಪಾತ್ರ ಮಹತ್ತರವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಮಾಜ ಸೇವೆಯನ್ನು ಮಾಡುವ ಸದುದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯನ್ನು ಸರ್ಕಾರವು ಅನುಷ್ಠಾನಗೊಳಿಸಿದೆ. ಸಮಾಜ ಸೇವೆಯನ್ನು ಮಾಡುವ ಸದುದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳು ಸಮಾಜ ಸೇವೆಯ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳನ್ನು ಸಹ  ತೊಡಗಿಕೊಂಡು ಉತ್ತಮ ಅಂಕ ಪಡೆದು ಉನ್ನತ ಉದ್ಯೋಗಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ಮಾತನಾಡಿ  ಇಂದಿನ ಸಮಾಜದಲ್ಲಿ ಯುವಸಮೂಹ ಅದರಲ್ಲೂ ವಿದ್ಯಾರ್ಥಿಗಳು ಮೊಬೈಲ್ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿಯನ್ನು ವಹಿಸುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ಅವರ ಭವಿಷ್ಯಕ್ಕೆ ಮಾರಕವಾಗುವುದರಲ್ಲಿ  ಸಂಶಯವಿಲ್ಲ. ಶಿಕ್ಷಣ ಪಡೆಯುವಂತಹ ಸರಿಯಾದ ಸಮಯದಲ್ಲಿ ಒಳ್ಳೆಯ ಶಿಕ್ಷಣವನ್ನು ಪಡೆದು ತಮ್ಮ ಪೋಷಕರುಗಳಿಗೆ ಹಾಗೂ ಕಲಿತ ಶಿಕ್ಷಣ ಸಂಸ್ಥೆಗಳಿಗೆ  ಗೌರವವನ್ನು ತರುವುದರ ಜೊತೆಗೆ ಭವಿಷ್ಯವನ್ನು ರೂಪಿಸಿಕೊಂಡಾಗ ಮಾತ್ರ ಸಮಾಜವು ಗುರುತಿಸುತ್ತದೆ. ಸಮಾಜ ಸೇವೆಯನ್ನು ಮಾಡುವ ಸದುದ್ದೇಶ ಮತ್ತು ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ ಆದರೆ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ದೊರಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲೀಲಾವತಿ ಪುಂಡಲಿಕ ಶೆಟ್ಟಿ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ. ಹಾರಂಬಳ್ಳಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿಜೇಂದ್ರ ಹೆಚ್ ಪಿ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಶೇಖರ್. ಕವಿತಾ ಭೀಮರಾಜ್. ಆರಂಭಿಸಿ ಶಾಲೆಯ ಮುಖ್ಯ ಶಿಕ್ಷಕ ಮೋಹನ್ ಕುಮಾರ್ ಹೆಚ್. ಶಾಲಾಭಿವೃದ್ಧಿ ಸಮಿತಿಯ ರವೀಂದ್ರ. ಗಣಪತಿ. ಇನ್ನಿತರರಿದ್ದರು
ಕಾರ್ಯಕ್ರಮದಲ್ಲಿ ಕುಮಾರಿ ಅಂಕಿತ ರವರಿಂದ ಹರಿವಾಣ ತಟ್ಟೆ ನೃತ್ಯವನ್ನು  ಏರ್ಪಡಿಸಲಾಗಿತ್ತು.

ಎನ್ನೆಸ್ಸೆಸ್ ಘಟಕ ಅಧಿಕಾರಿ ಪ್ರೊ. ಶಿಲ್ಪಾ ಪಾಟೀಲ್ ಸ್ವಾಗತಿಸಿ. ಉಪನ್ಯಾಸಕ ಚಿರಂಜೀವಿ ಕಾರ್ಯಕ್ರಮವನ್ನು ನಿರೂಪಿಸಿ. ಎನ್ಎಸ್ಎಸ್ ಘಟಕದ ಸಂಯೋಜನಾ ಅಧಿಕಾರಿ ಪ್ರೊ. ದೇವರಾಜ್ ವಂದಿಸಿದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago