ಹೊಸನಗರ ಪಟ್ಟಣದ ಸಮೀಪದ ಮೇಲಿನಬೆಸಿಗೆ ಗ್ರಾಮದ ಮಹಿಳೆಯೊಬ್ಬಳಿಗೆ ಅಡುಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮೇಲಿನಬೆಸಿಗೆ ನಿವಾಸಿ ನಾಗರಾಜ್ ಎಂಬುವವರ ಪತ್ನಿ ಸೌಮ್ಯ (24) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಸೌಮ್ಯ ಬುಧವಾರ ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದಾಗ ಅವರ ಕಾಲಿಗೆ ಹಾವು ಕಚ್ಚಿದ್ದು ಅವರ ಗಮನಕ್ಕೆ ಬಂದಿರಲಿಲ್ಲ.ಕೆಲ ಹೊತ್ತಿನಲ್ಲಿಯೇ ಹಾವು ಕಚ್ಚಿದ ಜಾಗದಲ್ಲಿ ತೀವ್ರತರ ಬಾಧೆಯಾಗಲು ಶುರುವಾದಗ ಮನೆಯವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮನೆಯವರು ಹಾವು ಕಚ್ಚಿರಬೇಕೆಂಬ ಶಂಕೆಯಿಂದ ಆಕೆಯನ್ನು ತಕ್ಷಣ ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ವಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಆಕೆ ಮೃತಪಟ್ಟಿದ್ದಾರೆ.
ಸೌಮ್ಯ ನಾಲ್ಕು ವರ್ಷದ ಹಿಂದೆ ನಾಗರಾಜ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರೆನ್ನಲಾಗಿದೆ. ಮೃತ ಸೌಮ್ಯಳಿಗೆ ಮೂರು ವರ್ಷದ ಗಂಡು ಮಗುವಿದೆ ಎಂದು ತಿಳಿದುಬಂದಿದೆ.
ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಜರು ಕ್ರಮ ಜರಗಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್