2023 ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡ್ತಾರಾ ಕಿಮ್ಮನೆ ರತ್ನಾಕರ್ !?

ತೀರ್ಥಹಳ್ಳಿ : ವಿಧಾನಸಭಾ ಚುನಾವಣೆ 2023 ರಲ್ಲಿ ನೆಡೆಯಲಿದ್ದು ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪಕ್ಷ ಸ್ಪರ್ಧೆ ಮಾಡಲಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದು ಅದರಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಸ್ಪರ್ಧೆ ಮಾಡಲಿದ್ದಾರ ಎಂಬ ಪ್ರೆಶ್ನೆ ಮೂಡಿದೆ..!?  ಕಾರಣ ತೀರ್ಥಹಳ್ಳಿಯ ಕಾಂಗ್ರೆಸ್ ಪಕ್ಷದಲ್ಲಿ ಈಗ ಆರ್ ಎಂ ಮಂಜುನಾಥ ಗೌಡರು ಸಹ ಇದ್ದು ಕಿಮ್ಮನೆ ರತ್ನಾಕರ್ ಅವರಿಗೆ  ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವುದು ಅನುಮಾನವಾಗಿದ್ದು ಈ ಕಾರಣಕ್ಕೆ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದ್ದು  ಹಾಗೆ ಏನಾದರು ಆಮ್ ಆದ್ಮಿ ಪಕ್ಷದಿಂದ ಕಿಮ್ಮನೆ ರತ್ನಾಕರ್ ಸ್ಪರ್ಧೆ ಮಾಡಿದ್ದೆ ಆದರೆ ತೀರ್ಥಹಳ್ಳಿ ವಿಧಾನಸಭಾ ಚುನಾವಣಾ ಕಣ ರಂಗೇರಲಿದೆ. 



ಕಿಮ್ಮನೆ ಆಪ್ ಪಕ್ಷದಿಂದ ಸ್ಪರ್ಧೆ ಮಾಡುವುದಾಗಿ ಅವರೇ ಹೇಳುತ್ತಾರಾ ಕಾದು ನೋಡಬೇಕಿದೆ.

ವರದಿ : ಅಕ್ಷಯ್ ಕುಮಾರ್

Leave a Reply

Your email address will not be published. Required fields are marked *