25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು.
ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5 ತಿಂಗಳ ಹಿಂದೆ ಮದುವೆ ನಡೆದಿತ್ತು. ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ಹುಲಿಯೂರು ದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇತ್ತು.
ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದರು.ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದರು. ಈ ವೇಳೆ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡಿದ್ದರು. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್