ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಆರೋಪಿಯ ಬಂಧನ

ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ  ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ. ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು…

Read More

ರಿಪ್ಪನ್ ಪೇಟೆ :ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಅಭೂತಪೂರ್ವ ಗೆಲುವಿನ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ :

ರಿಪ್ಪನ್ ಪೇಟೆ : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ‌ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ದ ವತಿಯಿಂದ  ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ,ವಿಜಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ ಪ್ರಧಾನಿ ಮೋದಿ,ಮುಖ್ಯಮಂತ್ರಿ ಬೊಮ್ಮಾಯಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾ ನಾಥ್ ,ಯಡಿಯೂರಪ್ಪ ಹಾಗೂ ಶಾಸಕ ಹರತಾಳು ಹಾಲಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಜೊತೆ ಮಾತನಾಡಿದ…

Read More

ಕಳಪೆ ಕಾಮಗಾರಿ, ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೂರು ಸರ್ಕಾರಿ ಕಿರಿಯ ಶಾಲೆಯ ನೆಲ ಹಾಸಿಗೆ ಟೈಲ್ಸ್ ಅಳವಡಿಕೆ ಕಾಮಗಾರಿ ಕಳಪೆ ಗುಣಮಟ್ಟ ಹೊಂದಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಆದರ್ಶಗೌಡ ಕಲ್ಲೂರು ಮಾತನಾಡಿ ಶಾಲೆ ನೆಲಹಾಸು ಕಾಮಗಾರಿಗೆ ಒಂದುವರೆ ಲಕ್ಷ ರೂಪಾಯಿ ಅನುದಾನ ಮಂಜೂರಾಗಿರುವ ಬಗ್ಗೆ ಗುತ್ತಿಗೆದಾರ ತಿಳಿಸಿರುತ್ತಾನೆ. ಆದರೆ ಕಾಮಗಾರಿ ಮಂಜೂರಾತಿ ವಿಷಯ ಶಾಲಾಭಿವೃದ್ಧಿ ಸಮಿತಿಗಾಗಲೀ, ಸ್ಥಳೀಯರೇ ಆದ ಗ್ರಾಮ ಪಂಚಾಯತಿ ಅಧ್ಯಕ್ಷರಿಗಾಗಲೀ ಹಾಗೂ ಗ್ರಾಮಸ್ಥರಿಗಾಗಲೀ ಮಾಹಿತಿ ಇರುವುದಿಲ್ಲ. ಏಕಾಏಕಿ ಬುಧವಾರ…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ನಿನ್ನೆ ರಾತ್ರಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಅರಸಾಳು ಗ್ರಾಮದ ನಿವಾಸಿ ಹಾಗೂ ರಿಪ್ಪನ್ ಪೇಟೆ MSIL ಸಂಸ್ಥೆಯ ಉದ್ಯೋಗಿಯಾಗಿದ್ದ ನವೀನ್ (36) ಮೃತಪಟ್ಟಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಟೊಯೋಟಾ ಕಾರು ಹಾಗೂ ರಿಪ್ಪನ್ ಪೇಟೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತಿದ್ದಾಗ ಬೆನವಳ್ಳಿ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್…

Read More

ಸಾವು ಸಾಧನೆಯಲ್ಲ, ಬದುಕಿ ಸಾಧಿಸಬೇಕು:ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ರಮ್ಯಾ

ರಿಪ್ಪನ್‌ಪೇಟೆ: ಮಹಿಳೆಯರಿಗೂ ಸಮಾಜದಲ್ಲಿ ಗೌರವಾಧಾರಗಳಿದ್ದು, ಅಂಜಿಕೊಳ್ಳುವುದನ್ನು ಬಿಟ್ಟು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮಸ್ಯೆಗಳಿಗೆ ಸಾವು ಪರಿಹಾರವೂ ಅಲ್ಲ ಸಾಧನೆಯೂ ಅಲ್ಲ. ಸಂಕಷ್ಟಗಳನ್ನು ಎದುರಿಸಿ ಬದುಕಬೇಕು ಎಂದು ಮಹಿಳಾ ಪೊಲೀಸ್  ಕಾನ್‌ಸ್ಟೇಬಲ್ ರಮ್ಯಾ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕಸ್ತೂರಿ ಮಹಿಳಾ ಬಳಗ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ ಒಳ್ಳೆಯ ಶಿಕ್ಷಣ ಮಹಿಳೆಯ ಜೀವನವನ್ನು ಕಾಪಾಡುತ್ತದೆ. ಬಂಗಾರ, ಹಣ, ಬಾಂಡ್ ಮಾಡಿಸುವುದಕ್ಕಿಂತ ಉತ್ತಮ ಶಿಕ್ಷಣ ನೀಡಿದರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಮಹಿಳೆಯರು ಗುರಿಯಡೆಗೆ ಸಾಗುವಾಗ ಇತರರು…

Read More

ಮಾರ್ಚ್ 12 ಮತ್ತು 13ಕ್ಕೆ ಸಾಗರದಲ್ಲಿ ಅದ್ದೂರಿ ಗಣಪತಿ ಕೆರೆಹಬ್ಬ

ಮಾ. 12 ಮತ್ತು 13 ರಂದು ಗಣಪತಿ ಕೆರೆಹಬ್ಬ ಕಾರ್ಯಕ್ರಮ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.12ರಂದು ಬೆಳಿಗ್ಗೆ 6ಕ್ಕೆ ಗಣಪತಿ ಕೆರೆ ಸ್ವಚ್ಚತೆ ಕಾರ್ಯಕ್ರಮಕ್ಕೆ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಗರದ ವಿವಿಧ ಸಂಘಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಅದೇ ದಿನ ಸಂಜೆ 6-30ಕ್ಕೆ ಗಂಗಾರತಿ ಮಾದರಿಯಲ್ಲಿ…

Read More

ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆ : ದೂರು ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಿಮ್ಮ…

Read More

ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು, ಸ್ವಾಗತಕ್ಕೆ ಸಜ್ಜಾದ ಹೊಳಲೂರು ಗ್ರಾಮ

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಭೇಟಿ ನೀಡಲಿರುವ ಕಾರ್ಯಕ್ರಮದ ಅಂಗವಾಗಿ ಇಂದು ಹಿರಿಯ ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನವದೆಹಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಆಯುಕ್ತರಾದ ಶಿಲ್ಪಾ ಶರ್ಮಾ ಇಂದು ಹೊಳಲೂರು ಗ್ರಾಮದ ಸ್ಪಚ್ಚ…

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More