ಪ್ರಿಯಕರ ಉಪನ್ಯಾಸಕನ ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ : ಮದುವೆ ಮಂಟಪದಲ್ಲೆ ವಿಷ ಕುಡಿದ ನವ ವಧು
ಶಿವಮೊಗ್ಗ: ಪ್ರಿಯಕರ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಪ್ರೇಯಸಿ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ ನಗರದ ಓ.ಟಿ.ರಸ್ತೆಯಲ್ಲಿ ನಡೆದಿದೆ. ರೂಪಶ್ರೀ ಮೃತ ದುರ್ದೈವಿ. ರೂಪಶ್ರೀ ಅವರು ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಬೇರೆ ಯುವತಿಯ ಜೊತೆ ಮದುವೆ ಆಗಿದ್ದರು. ಇದರಿಂದ ನೊಂದ ರೂಪಶ್ರೀ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭ…