Headlines

ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಜೀವ ಭಯ ಬಿಟ್ಟು ಪೆಟ್ರೋಲ್ ತುಂಬಿಸಿಕೊಳ್ಳಲು ಜನರಿಂದ ನೂಕು‌ನುಗ್ಗಲು

ಶಿವಮೊಗ್ಗ: ಜಾವಳ್ಳಿ ಸಮೀಪದಲ್ಲಿ ಇಂದು ಮದ್ಯಾಹ್ನ ಪೆಟ್ರೋಲ್ ತುಂಬಿದ ಟ್ಯಾಂಕರ್‌ವೊಂದು ಪಲ್ಟಿಯಾಗಿರುವ ಘಟನೆ ವರದಿಯಾಗಿದೆ. ಜಾವಳ್ಳಿ ಅರಬಿಂದೂ ಶಾಲೆಯ ಸಮೀಪ ಸೊಲ್ಲಾಪುರ ಮತ್ತು ಮಂಗಳೂರು ಹೈವೆ ರಸ್ತೆಯಲ್ಲಿ ಸಾಗುತ್ತಿದ್ದ ಪೆಟ್ರೋಲ್ ತುಂಬಿದ ಲಾರಿಯೊದು ಪಕ್ಕಕ್ಕೆ ಉರುಳಿ ಬಿದ್ದಿದೆ. ಮಂಗಳೂರಿನಿಂದ 12½ ಸಾವಿರ ಲೀಟರ್ ಪೆಟ್ರೋಲ್ ನ್ನ ಹೊತ್ತು ಹೋಗುತ್ತಿದ್ದ ಲಾರಿ ರಸ್ತೆಗೆ ಉರುಳಿದೆ. ಅಕ್ಕಪಕ್ಕದ ಜನ ಕೊಡಪಾನ ಬಕೆಟ್ ನಲ್ಲಿ ತುಂಬಿಸಿಕೊಂಡು ಹೋಗಿರುವ‌ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಪೊಲೀಸರು ಬಂದು ಸಾರ್ವಜನಿಕರನ್ನ ಚದುರಿಸಿದ್ದಾರೆ. ಟ್ಯಾಂಕರ್ ಪಲ್ಟಿಯಾದ ಸಮಯದಲ್ಲಿ ಜನರು…

Read More

ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ : ಎರಡು ದಿನ ಉಚಿತ ವೀಕ್ಷಣೆಗೆ ವ್ಯವಸ್ಥೆ

ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಪುತ್ರ ಕೆ.ಇ.ಕಾಂತೇಶ್ ಅವರು ‘ದಿ ಕಾಶ್ಮೀರ ಫೈಲ್ಸ್’ ಉಚಿತ ವೀಕ್ಷಣೆಗೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಉಚಿತ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಸಂಖ್ಯೆಯ ಜನ ಸಿನಿಮಾ ನೋಡಿದ್ದಾರೆ. ಸಚಿವ ಈಶ್ವರಪ್ಪ ಅವರು ಪತ್ನಿ ಹಾಗೂ ಕುಟುಂಬ ಸಹಿತ ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಕುಂಚಿಟಿಗರ ಸಂಸ್ಥಾನದ ಸ್ವಾಮೀಜಿ ಅವರೊಂದಿಗೆ…

Read More

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್

ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…

Read More

ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ. ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ…

Read More

ಸಾಗರದ ಹೆಲಿಪ್ಯಾಡ್ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಸಾಗರದ ಹೆಲಿಪ್ಯಾಡ್ ನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬೈಕ್ ನ್ನು ಹೆಲಿಪ್ಯಾಡ್ ನಲ್ಲಿ ಕೆಳಗೆ ಬೀಳಿಸಿ ಅಲ್ಲೆ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ತಾಳಗುಪ್ಪ ಸಮೀಪದ ಶಿರೂರು ಹಳ್ಳಿಯ ನಿವಾಸಿ ಅಣ್ಣಪ್ಪ  ( 33 ) ವರ್ಷ ಎಂದು ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…

Read More

ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!

ಹಿಜಾಬ್​ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್​​ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ.  ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು  ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್…

Read More

ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…

Read More

ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಣೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ ಜಾರಿ

ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ…

Read More

ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ ಪಂಚಾಯತ್ನಿ ವ್ಯಾಪ್ತಿಯ ಕಾನಗೋಡು ತಮ್ಮಡಿಕೊಪ್ಪ ಹಾರಂಬಳ್ಳಿ ಬಾಳೆಕೊಡ್ಲು, ಕಾರೆಹೊಂಡ, ಕಗಚಿ, ತಳಲೆ, ಸುಳಕೋಡು ಗ್ರಾಮದ ರೈತರ ಜಮೀನಿಗೆ ನಿರಂತರ ದಾಳಿಯಿಡುತ್ತಿದೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಕಬ್ಬು ಬೆಳೆಗಳನ್ನು ಮುರಿದು ತಿಂದು ನಷ್ಟಮಾಡುತ್ತಿದೆ. ಈ ಭಾಗದಲ್ಲಿ ಆನೆ ಬೀಡುಬಿಟ್ಟಿರುವ ಮಾಹಿತಿಯಿದ್ದರೂ ಅರಣ್ಯ ಇಲಾಖೆ ಮಾತ್ರ ರಾತ್ರಿ ಗಸ್ತು…

Read More
Exit mobile version