Headlines

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್  ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ ಮೇಲೆ ವಿನಾಕಾರಣ ಹೇರಿರುವ ಶುಲ್ಕದ ಹೊರೆಯನ್ನು ಕಡಿತಗೊಳಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು 

2021 ರಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಸೆಮಿಸ್ಟರ್‌ನ ಪೂರ್ಣ ಪರೀಕ್ಷಾ ಶುಲ್ಕವನ್ನು ಪಾವತಿಸಿದ್ದರು. ಆದರೆ ಕೋವಿಡ್ 19 ರ ಕಾರಣದಿಂದ ಪರೀಕ್ಷೆಯನ್ನು ನಡೆಸಿರುವುದಿಲ್ಲ.

ಈಗ ವಿವಿಯು ಮೂರನೇ ಸೆಮಿಸ್ಟರ್ ನ ಪೂರ್ಣ ಪರೀಕ್ಷಾ ಶುಲ್ಕವನ್ನು ಪಾವತಿಸುವಂತೆ ಪ್ರಕಟಣೆ ಹೊರಡಿಸಿದೆ. ಈ ಪರೀಕ್ಷೆಯ ಅಂಕಪಟ್ಟಿ ಶುಲ್ಕವನ್ನು ಹೊರತುಪಡಿಸಿ ಉಳಿದ ಶುಲ್ಕವನ್ನು ಕಡಿತಗೊಳಿಸುವಂತೆ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆಯ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇


Leave a Reply

Your email address will not be published. Required fields are marked *