Headlines

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ

ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು.

ಪೊಲೀಸರ ಮೇಲೆ, ಪೊಲೀಸ್ ವಾಹನದ ಮೇಲೆ ಹಲ್ಲೆ ಮಾಡಿದ್ದಾರೆ ಅಂದ್ರೆ ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕೆ ಇದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ. ನಮ್ಮನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆ ಕೈ ಮಾಡೋದು, ಠಾಣೆಗೆ ನುಗ್ಗುವ ಪ್ರಯತ್ನ ಮಾಡೋದು ಅಕ್ಷಮ್ಯ ಅಪರಾಧ. ಅದಕ್ಕೆ ತಕ್ಕ ಶಿಕ್ಷೆ ಆಗುತ್ತದೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

Leave a Reply

Your email address will not be published. Required fields are marked *