w
Headlines
Home » ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸ್ಥಳದಲ್ಲೇ ಸಾವು

ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸ್ಥಳದಲ್ಲೇ ಸಾವು

 

ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ.

ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ.

ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ  ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ.

ಮೃತ ಯುವರಾಜ್ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಸ್ಥಳಕ್ಕೆ 112 ಪೊಲೀಸ್ ಸಿಬ್ಬಂದಿ ತೆರಳಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.