w
Headlines
Home » ಮಕ್ಕಳ ಅಶ್ಲೀಲ ವೀಡಿಯೋ ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್:

ಮಕ್ಕಳ ಅಶ್ಲೀಲ ವೀಡಿಯೋ ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್:

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ನೀಡಿದೆ.

ಶಿವಮೊಗ್ಗ ತಾಲೂಕಿನ ದಮ್ಮಳ್ಳಿ ಗ್ರಾಮದ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು.

 ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಇಎನ್ ಠಾಣೆ ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಅವರು 2020ರ ಡಿಸೆಂಬರ್ 24ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ದಯಾನಂದ ವಿ.ಹೆಚ್ ಅವರು ವಿಚಾರಣೆ ನಡೆಸಿದರು. ರಘು ತಪ್ಪೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡುವಂತೆ ಆದೇಶಿಸಿದ್ದಾರೆ. 

Leave a Reply

Your email address will not be published. Required fields are marked *

Newsmatic - News WordPress Theme 2026. Powered By BlazeThemes.
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.