ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಆಸ್ಪತ್ರೆಗೆ ತನ್ನದೇ ಕಾರಿನಲ್ಲಿ ಕಳುಹಿಸಿಕೊಡುವ ಮೂಲಕ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾನವೀಯತೆ ಮೆರೆದ ಘಟನೆ ಇಂದು ನಡೆದಿದೆ.
ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್ನಲ್ಲಿ ಪೋಟೋ ತೆಗೆಯುವಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿ ಇರುತ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ.
ಸಾಗರದಿಂದ ಹೊಸನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹುಲಿದೇವರ ಬನ ಗ್ರಾಮದ ಬಳಿ ವ್ಯಕ್ತಿಯೊಬ್ಬ ಬೈಕ್ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದರು. ಕೂಡಲೇ ತಮ್ಮ ಕಾರು ನಿಲ್ಲಿಸಿದ ಮಾಜಿ ಶಾಸಕರು ಪ್ರಥಮ ಚಿಕಿತ್ಸೆ ನೀಡಿ ಆತ ಸಾವರಿಸಿಕೊಂಡ ನಂತರ ತಮ್ಮ ವಾಹನದಲ್ಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಸೇರಿಸುವುದರ ಮೂಲಕ ಮಾನವೀಯತೆ ತೋರಿದರು.
ಮಾಜಿ ಶಾಸಕರ ಈ ಮಾನವೀಯತೆಯ ನಡೆಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.