w
Headlines
Home » ಸಚಿವ ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ :

ಸಚಿವ ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ :

ರಿಪ್ಪನ್ ಪೇಟೆ : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಚಿವರಾದ ಕೆ.ಎಸ್. ಈಶ್ವರಪ್ಪನವರ ಹೆಸರು ಲಂಚಾರೋಪದಲ್ಲಿ ಪ್ರಸ್ತಾಪವಾಗಿದ್ದು, ಉಲ್ಲೇಖಿಸಿದ ವ್ಯಕ್ತಿಯು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಘಟನೆಗೆ ಸಚಿವರು ಕಾರಣವೆಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆಹೊತ್ತು ಕೂಡಲೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದ ವತಿಯಿಂದ ನಾಡ ಕಛೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಆಮ್ ಅದ್ಮಿ ಪಕ್ಷದ ತಾಲೂಕ್ ಉಪಾಧ್ಯಕ್ಷರಾದ ಹಸನಬ್ಬ ಮಾತನಾಡಿ ಇಷ್ಟೊಂದು ಗಂಭೀರ ಆರೋಪ ಎದುರಿಸುತ್ತಿರುವ ಸಚಿವರನ್ನು ಮುಖ್ಯಮಂತ್ರಿಗಳು ಸಚಿವ ಸಂಪುಟದಿಂದ ವಜಾಗೊಳಿಸಿ, ತನಿಖೆ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಭಾಗವಾಗಿರುವ ಸಚಿವರು ಲಂಚಗುಳಿತನದಲ್ಲಿ ಭಾಗಿಯಾಗಿರುವ ಆರೋಪ ಕೆಲವು ತಿಂಗಳುಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದು, ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗಮನಕ್ಕೆ ಗುತ್ತಿಗೆದಾರರು ಪತ್ರಮುಖೇನ ತಂದಿದ್ದಾರೆ. ಆದರೆ ಯಾವುದೇ ಕ್ರಮವಹಿಸದೆ, ರಾಜ್ಯ ಸರ್ಕಾರ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡಿದಂತೆ ವರ್ತಿಸುತ್ತಿದ್ದಾರೆ. ರಾಜ್ಯಪಾಲರು ರಾಜ್ಯ ಸರ್ಕಾರವನ್ನು ಅಮಾನತ್ತುಗೊಳಿಸಿ ತನಿಖೆ ನಡೆಸುವ ಮೂಲಕ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಒತ್ತುನೀಡಬೇಕಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಆಮ್ ಆದ್ಮಿ ಪಕ್ಷದ ಕೆ ಡಿ ಈಶ್ವರಪ್ಪ ,ಹನೀಫ಼್ ,ಆರ್ ಎಸ್ ನಾಗರಾಜ್,ನಾರಾಯಣೋಜಿ ರಾವ್ ,ನಾಸೀರ್ ಹಾಗೂ ಇನ್ನಿತರರಿದ್ದರು.

ಪ್ರತಿಭಟನೆಯ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.