ಅನೈತಿಕ ಚಟುವಟಿಕೆಯ ತಾಣವಾಗಿರುವ ಹೊಸನಗರ ಪರಿವೀಕ್ಷಣಾ ಮಂದಿರ (ಐಬಿ) : ಸಂಜೆಯಾಗುತಿದ್ದಂತೆ ಕುಡುಕರದ್ದೇ ದರ್ಬಾರ್ ಇಲ್ಲಿ!!!!!!!!

ಹೊಸನಗರ : ಪಟ್ಟಣದ ಪರಿವೀಕ್ಷಣಾ ಮಂದಿರ (ಐಬಿ) ಸಂಜೆಯಾಗುತ್ತಿದ್ದಂತೆ ಅನೈತಿಕ ಚಟುವಟಿಕೆಗಳ ನೆಚ್ಚಿನ ತಾಣವಾಗಿದೆ ಹಾಗೆ ಇಲ್ಲಿರುವ ಪ್ರವಾಸಿ ಮಂದಿರವು ರಾತ್ರಿ ಸಮಯದಲ್ಲಿ ಭೂತ ಬಂಗಲೆಯಂತೆ ಕಾಣುವ ಎಲ್ಲಾ ರೀತಿಯ ವಾತಾವರಣವು ನಿರ್ಮಾಣವಾಗಿದೆ.

ಹೌದು ಹೊಸನಗರ ತಾಲ್ಲೂಕಿನ ಆಸುಪಾಸಿನ ಹುಂಚದ ಪದ್ಮಾವತಿ ದೇವಸ್ಥಾನ, ರಾಮಚಂದ್ರಾಪುರ ಮಠ, ಕಾರಣಗಿರಿ(ಕಾರ್ಗಡಿ)ಯ ಗಣಪತಿ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹೀಗೆ ವಿವಿಧ ದೇವಾಲಯಗಳನ್ನು ವೀಕ್ಷಿಸಲು ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಭಕ್ತರು ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಬೆಟ್ಟ ಮತ್ತು ಸುತ್ತ ಮುತ್ತ ಇರುವ ಪ್ರವಾಸಿ ತಾಣಗಳನ್ನು ವೀಕ್ಷಣೆ ಮಾಡಲು ವಿವಿಧ ರೀತಿಯ ಪ್ರವಾಸಿಗರು ಆಗಮಿಸುತ್ತಾರೆ. ದೂರದೂರುಗಳಿಂದ ಈ ರೀತಿಯಲ್ಲಿ ಆಗಮಿಸುವವರಿಗೆ ಅಥವಾ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿ ಆಯಾಸದಿಂದ ಆಗಮಿಸಿದ ಯಾತ್ರಾರ್ಥಿಗಳಿಗೆ ವಿಶ್ರಾಂತಿ ಪಡೆಯಲು ಅಥವಾ ಒಂದು ದಿನ ತಂಗಲು ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯಿಂದ   ಸುಸಜ್ಜಿತವಾದ ಕಟ್ಟಡ ಹೊಂದಿರುವ ಪ್ರವಾಸಿ ಮಂದಿರದ ವ್ಯವಸ್ಥೆ ಮಾಡಲಾಗಿದೆ.


ಆದರೆ ಈ ಪ್ರವಾಸಿ ಮಂದಿರದ ಪಕ್ಕದಲ್ಲಿಯೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಇಲಾಖೆ ಕಛೇರಿ ಇದ್ದು, ಈ ಕಛೇರಿ ಮತ್ತು ಪ್ರವಾಸಿ ಮಂದಿರದ  ಸುತ್ತ ಮುತ್ತ ಬೀದಿ ದೀಪಗಳಿಲ್ಲದೇ ‌ಸಂಜೆಯಾಗುತ್ತಲೇ ಕತ್ತಲೆಯಿಂದ ಕೂಡಿ ಮಧ್ಯಪಾನ ಧೂಮಪಾನ ಸೇವಿಸುವವರಿಗೆ, ಹೆಂಡ ಖಂಡ ಪ್ರಿಯರಿಗೆ, ಅನೇಕ ಪ್ರೇಮಿಗಳ ವಿಹಾರಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಇಲ್ಲಿ ಮುಂಜಾವಿನ ವೇಳೆ ಹಾಗೂ ಸಂಜೆಯಾಗುತ್ತಿದ್ದಂತೆ ಪಟ್ಟಣದ ವಿವಿಧ ಭಾಗಗಳಿಂದ ವಾಯು ವಿಹಾರಕ್ಕೆಂದು ನೂರಾರು ಜನರು ಬರುತ್ತಾರೆ ಅವರು ನಡೆದಾಡುವ ರಸ್ತೆಯ ಇಕ್ಕೆಲಗಳಲ್ಲಿ ಕುಡುಕರು ಕುಡಿದು ಬಿಸಾಡಿದ ಪ್ಲಾಸ್ಟಿಕ್ ಪೌಚ್ ಹಾಗೂ ಬಾಟಲಿಗಳು ಮತ್ತು ಹೊಡೆದು ಹೋದ ಗಾಜುಗಳು ಎಲ್ಲೆಂದರಲ್ಲಿ ಬಿದ್ದಿರುತ್ತದೆ. ಇಲ್ಲಿ ವಾಯು ವಿಹಾರಕ್ಕೆಂದು ಆಗಮಿಸುವವರಿಗೆ ವಿಶ್ರಾಂತಿಸಲು ಹಲವಾರು ಮಾನವ ನಿರ್ಮಿತ ಸಿಮೆಂಟಿನ ಆಸನಗಳಿದ್ದರೂ ಹಗಲು ಕುಡುಕರು ಕುಳಿತು ಇಲ್ಲವೇ ಮಲಗಿರುವುದನ್ನು ಕಂಡು ವಿಶ್ರಮಿಸಲು ಸ್ಥಳವಿಲ್ಲದೇ ಬೇರೆ ಬೇರೆಡೆ ಕುಳಿತು ವಿಶ್ರಾಂತಿ ಪಡೆದು ಹೋಗುವಂತಹಾ ಪರಿಸ್ಥಿತಿ ನಿರ್ಮಾಣವಾಗಿದೆ.


ಸ್ವಚ್ಛತೆ ಬಗ್ಗೆ ರಾಜ್ಯದಲ್ಲಿಯೇ ಮಾದರಿಯಾಗುವಂತಿರುವ ಹೊಸನಗರ ತಾಲ್ಲೂಕಿನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಂದು ಹೋಗುವ ಅನೇಕ ಯಾತ್ರಿಕರು ವಿಶ್ರಾಂತಿ ಪಡೆಯುವ ಅಥವಾ ಒಂದು ದಿನ ತಂಗಿ ಹೋಗುವವರಿಗೆ ರಾತ್ರಿವೇಳೆ ಭಯ ಹುಟ್ಟಿಸುವ ಹಾಗೂ ಹಗಲಿನ ವೇಳೆ ಅಸಯ್ಯ ಎನಿಸುವ ವಾತಾವರಣ ನಿರ್ಮಾಣವಾಗಿದೆ.

ಮಲೆನಾಡಿನ ಅನೇಕ ಗಿಡ ಮರಗಳನ್ನು ಹೊಂದಿ ಉತ್ತಮ ಪರಿಸರದಿಂದ ಕೂಡಿರಬೇಕಾಗಿದ್ದ ಈ ಪ್ರವಾಸಿ ಮಂದಿರ ಅಸಮಾಧಾನ ವ್ಯಕ್ತಪಡಿಸುವ ವಾತಾವರಣ ನಿರ್ಮಾಣವಾಗಿದೆ. ಈ ತಾಲ್ಲೂಕಿನಿಂದ ಹೊಸನಗರ- ಸಾಗರ ಮತ್ತು ಹೊಸನಗರ- ತೀರ್ಥಹಳ್ಳಿ ಕ್ಷೇತ್ರದಿಂದ ಎರಡು ಜನ ಶಾಸಕರು ಆಯ್ಕೆಯಾಗಿದ್ದಾರಲ್ಲದೇ, ಹೊಸನಗರ- ತೀರ್ಥಹಳ್ಳಿ ಕ್ಷೇತ್ರದಿಂದ ಆಯ್ಕೆಯಾದ ಆರಗ ಜ್ಞಾನೇಂದ್ರ ರವರು ರಾಜ್ಯ ಸರ್ಕಾರದ ಗೃಹ ಸಚಿವರಾಗಿದ್ದಾರೆ.

ಒಂದೊಮ್ಮೆ ಈ ಇಬ್ಬರು ನಾಯಕರು ಹೊಸನಗರದಲ್ಲಿ ಯಾವುದಾದರೂ ಕಾರ್ಯಕ್ರಮಗಳಿಗೆ ಆಗಮಿಸಿದರೆ ಇವರೊಂದಿಗೆ ಆಗಮಿಸಿದ ಕಾರ್ಯಕರ್ತರು ಅಥವಾ ಮುಖಂಡರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿಯೇ ತಂಗಬೇಕಾಗುತ್ತದೆ, ತಂಗಿದವರು ಇಂತಹ ಕೆಟ್ಟ ವಾತಾವರಣ ವೀಕ್ಷಣೆ ಮಾಡಿದರೆ ಜನಪ್ರತಿನಿಧಿಗಳ ಪಾಡೇನು? ಆದ್ದರಿಂದ ಈ ತಾಲ್ಲೂಕಿನ ಜನಪ್ರತಿ ನಿಧಿಗಳಾಗಲಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾಗಲೀ ಇತ್ತಕಡೆ ಗಮನ ಹರಿಸಿ ಇನ್ನಾದರೂ ಪ್ರವಾಸಿ ಮಂದಿರದ ಸುತ್ತ ಮುತ್ತ ಬೀದಿ ದೀಪಗಳನ್ನು ಪಟ್ಟಣ ಪಂಚಾಯಿತಿಯಿಂದಾಗಲೀ ಅಥವಾ ಪ್ರವಾಸಿ ಮಂದಿರಕ್ಕೆ ಸಂಬಂಧಿಸಿದ ಲೋಕೋಪಯೋಗಿ ಇಲಾಖೆಯಿಂದಾಲೀ ದೀಪಗಳನ್ನು ಮತ್ತು ಸುಗಂಧ ಭರಿತ ಹೂ ಗಿಡಗಳನ್ನಾಗಲೀ  ಬೆಳೆಸುವಂತಾಗುವ ಮೂಲಕ ಹೆಂಡ ಸಾರಾಯಿ ಕುಡುಕರಿಗೆ ಕಡಿವಾಣ ಹಾಕುವ ವ್ಯವಸ್ಥೆ ಮಾಡಬೇಕಿದೆ ಎಂಬುದು ಸಾರ್ವಜನಿಕರ ಅಂಬೋಣ.

ವರದಿ:-ಪುಷ್ಪಾ ಜಾಧವ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

3 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

3 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

3 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

11 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

12 hours ago