ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ.
ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ.
ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ.
ಈಗ ಮೃತದೇಹವನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.ಮೃತನ ಅಂತ್ಯಕ್ರಿಯೆ ಇಂದು ಸಂಜೆ ರಿಪ್ಪನ್ ಪೇಟೆಯ ಖಬರ್ ಸ್ಥಾನ್ ನಲ್ಲಿ ನಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ರಿಪ್ಪನ್ ಪೇಟೇ ನೆಹರು ಬಡಾವಣೆ ನಿವಾಸಿಯಾಗಿದ್ದ ಅನೀದ್ (22) ತನ್ನ ತಾಯಿ ಮತ್ತು ಅಂಗವಿಕಲ ಸಹೋದರ ಮತ್ತು ಅಂಗವಿಕಲ ಸಹೋದರಿಯೊಂದಿಗೆ ಜೀವನ ಸಾಗಿಸುತ್ತಿದ್ದನು.ಮನೆಯಲ್ಲಿ ದುಡಿಯುವ ಯುವಕನೇ ಸಾವನ್ನಪ್ಪಿರುವುದು ಈ ಬಡ ಕುಟುಂಬಕ್ಕೆ ಸಿಡಿಲು ಬಡಿದ ಹಾಗೇ ಆಗಿದೆ.
(ಮೃತ ಯುವಕನ ಅಂಗವಿಕಲ ಸಹೋದರಿ ಮತ್ತು ಬಡ ತಾಯಿ)
ಯಾರೋ ಅಪರಿಚಿತ ವ್ಯಕ್ತಿಗಳನ್ನು ಬದುಕಿಸಲು ಹೋಗಿ ತನ್ನ ಪ್ರಾಣ ಕೊಟ್ಟ ಯುವಕನ ಕುಟುಂಬಕ್ಕೆ ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಧೈರ್ಯ ತುಂಬಿ ಸಹಕಾರ ಮಾಡುವುದರ ಮೂಲಕ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಕುಟುಂಬಕ್ಕೆ ಆಸರೆಯಾಗಬೇಕಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್