ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ.
ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ.
ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782 ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಗೌತಮಪುರದ ಯುವಕರ ತಂಡ ಇವನ ಬೈಕ್ ನ ಬ್ಯಾಗ್ ಪರಿಶೀಲಿಸಿದಾಗ ಗೋಮಾಂಸ ಪತ್ತೆಯಾಗಿದೆ.
ತಕ್ಷಣ ಸಾಗರ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ಸ್ಥಳಕ್ಕೆ ಆನಂದಪುರ ಪೊಲೀಸರು ಆಗಮಿಸಿ ವ್ಯಕ್ತಿಯನ್ನು ವಶಕ್ಕೆ
ಪಡೆದಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್