ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

>ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ, ನಾಗರಾಜ, ಸತ್ಯನಾರಾಯಣ, ವಿನೋದ, ಹಾಗೂ ನಾಗರತ್ನ ಇವರುಗಳು 08-04-22 ರಂದು ಬೆಳಿಗ್ಗೆ ಸುಮಾರು ಹತ್ತು ಗಂಟೆ ಸಮಯದಲ್ಲಿ ತಮ್ಮ ತೋಟದಲ್ಲಿ ಔಷಧಿ  ಹೊಡೆಯುತ್ತಿದ್ದ ಗುರುಬಸಪ್ಪ ಇವರ ಮೇಲೆ ಮೇಲ್ಕಂಡ ಆರೋಪಿಗಳು ಕೊಲೆ ಬೆದರಿಕೆ ಹಾಕಿ, ಏಕಾಕಿ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿ ಆಗಿರುತ್ತಾರೆ.

ನಂತರ ತೀವ್ರವಾಗಿ ಗಾಯಗೊಂಡ ಗುರುಬಸಪ್ಪ ಇವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಗೆ ಗುರುಬಸಪ್ಪ ಅವರ ಪತ್ನಿ  ಲಲಿತಾ ರವರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾಗಿ ನಾಲ್ಕು ದಿನವಾದರೂ ಆರೋಪಿಗಳನ್ನು ಬಂದಿಸದೆ ಇರುವುದರಿಂದ ತಮ್ಮ ಕುಟುಂಬಕ್ಕೆ ಜೀವ ಭಯವಿದೆ ಎಂದು ಹಿರಿಯ ಅಧಿಕಾರಿಗಳಲ್ಲಿ ಲಲಿತ ಮನವಿ ಮಾಡಿದ್ದು, ಕೂಡಲೇ ಪಾತಕಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago