ಇನ್ಸ್ಟಾಗ್ರಾಮ್ ನಲ್ಲಿ ಯುವತಿಯ ಬೆತ್ತಲೆ ವೀಡಿಯೋ ಪಡೆದು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಕಾಮುಕನ ಬಂಧನ :

ಇದೇ ತಿಂಗಳು 6ನೇ ತಾರೀಖಿನಂದು ಇನ್ ಸ್ಟಾಗ್ರಾಮ್ ನಲ್ಲಿ ಯುವತಿಯ ಫೋಟೊ ಪಡೆದು ಆಕೆಯ ಫೋಟೊವನ್ನ ಡಿಪಿ ಗೆ ಹಾಕಿಕೊಂಡ ಕಾಮುಕ ಯುವಕನಿಂದ ಬ್ಲಾಕ್ ಮೇಲ್ ಗೆ ಒಳಗಾಗಿದ್ದ ಶಿರಾಳಕೊಪ್ಪ ಪೊಲೀಸ್ ಠಾಣೆಯ ತೊಗರ್ಸಿಯ ಗ್ರಾಮದ ಯುವತಿ ತನ್ನ ಬೆತ್ತಲೆ ವಿಡಿಯೋವನ್ನ ನೀಡಿ ಕಾಮುಕನ  ಬ್ಲಾಕ್ ಮೇಲ್ ನಿಂದ ಪರದಾಡಿ ಆತ್ಮ ಹತ್ಯೆಗೆ ಶರಣಾಗಿದ್ದಳು.

ಈ ಸುದ್ದಿ ಶಿರಾಳಕೊಪ್ಪದಲ್ಲಿ ತಲ್ಲಣಗೊಳಿಸಿತ್ತು. ಯುವತಿಯ ತಂದೆ ಈ ಬಗ್ಗೆ ದೂರು ನೀಡಿದ್ದರು ದೂರು ಪಡೆದ ಶಿರಾಳಕೊಪ್ಪ ಪೊಲೀಸರು ಕಾಮುಕನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ನಡೆದ 9 ನೇ ದಿನಕ್ಕೆ ಆರೋಪಿಯನ್ನ ಬಂಧಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪುನೀತ್ ಎಂಬುವನನ್ನು ಬಂಧಿಸಲಾಗಿದೆ. ಶಿರಾಳಕೊಪ್ಪದ ನ್ಯಾಯಾಲಯದಲ್ಲಿ ಜೆಸಿಗೆ ಒಳಪಡಿಸಲಾಗಿದೆ. ಶಿವಮೊಗ್ಗ ಕಾರಾಗೃಹದಲ್ಲಿ ಆತನನ್ನ ಇರಿಸಲಾಗಿದೆ.

ಪುನೀತ್ ಎಂಬ ಕಾಮುಕ ಇವಳೊಬ್ಬಳ ಜೊತೆ ಮಾತ್ರ ಈ ರೀತಿಯ ಬ್ಲಾಕ್ ಮೇಲ್ ಮಾಡಿಲ್ಲ. ಇದನ್ನ ರೂಡಿಸಿಕೊಂಡು ಬಂದಂತೆ ಕಾಣುತ್ತಿದೆ. 20 ಕ್ಕೂ ಹೆಚ್ಚು ಯುವತಿಯರೊಂದಿಗೆ ಈ ರೀತಿ ಬ್ಲಾಕ್ ಮೇಲ್ ಗೆ ಒಳಗಾಗಿ ಸಂತ್ರಸ್ತ್ರರಾಗಿದ್ದಾರೆ ಎಂಬ ಮಾಹಿತಿ ಹೊರಬೀಳುತ್ತಿದೆ.

ಏನೇ ಆಗಲಿ ಅಮಾಯಕ ಹೆಣ್ಣುಮಕ್ಕಳ ಜೊತೆ ಚೆಲ್ಲಾಟವಾಡುವ ಇಂತಹ ಕಾಮುಕರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.

ಇನ್ ಸ್ಟಾಗ್ರಾಮ್ ನಲ್ಲಿ ಹೆಣ್ಣುಮಕ್ಕಳು ಸಿಕ್ಕರೆ ಸಾಕು ಜೊಲ್ಲು ಸುರಿಸುವ ಕಾಮುಕ ಯುವಕರಿಂದ ಎಚ್ಚರ ವಹಿಸುವ ಅವಶ್ಯಕತೆ ಇದೆ. ಈತ ಏನೋ ಮಾಡಿಬಿಡ್ತಾನೆ ಎನ್ನುವ ಭಯಬಿಟ್ಟು ಧೈರ್ಯದಿಂದ ಪೊಲೀಸ್ ಠಾಣೆಯ ಮೆಟ್ಟಿಲೇರಿ ಕಾನೂನು ಕ್ರಮಕ್ಕೆ ಯುವತಿಯರು ಮುಂದಾಗಬೇಕಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

7 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

9 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

10 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

10 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago