ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ  ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ.
ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ  ನಡೆಸುತ್ತಿದ್ದಾರೆ.
ಆದರೆ ಇವತ್ತು ಸಾಗರದಲ್ಲಿ  ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ ಎಂಬ ಹೊಸ ಮಾತನ್ನು ಹೇಳಿದ್ದಾರೆ.
ಜಿಕೆಬಿ ಗೆ ಚುನಾವಣೆಗೆ ಸಿದ್ದರಾಗಿ ಎಂದಿದ್ದ ಕಾಗೋಡು :
ಆದರೆ ಇತ್ತೀಚೆಗೆ ಬಟ್ಟೆಮಲ್ಲಪ್ಪ ಹಾಗೂ ರಿಪ್ಪನ್ ಪೇಟೆಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಸ್ವತಃ ಕಾಗೋಡು ತಿಮ್ಮಪ್ಪ ರವರೇ ಬೇಳೂರು ಗೋಪಾಲಕೃಷ್ಣ ರವರಿಗೆ ಕ್ಷೇತ್ರಾದ್ಯಂತ ಓಡಾಡಿ ಚುನಾವಣೆಗೆ ಸಿದ್ದರಾಗಿ ಎಂದು ಮಾರ್ಮಿಕವಾಗಿ ಹೇಳಿದ್ದರು.
ಆದರೆ ಈಗ ಕೆಪಿಸಿಸಿ ವಕ್ತಾರೆ ರಾಜನಂದಿನಿ ರವರ ಈ ಹೇಳಿಕೆ ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ನಡೆಸುತ್ತಿರುವ ರಾಜಕೀಯ ನಡೆ ಇರಬಹುದೇ ಎಂದು ಕಾಂಗ್ರೆಸ್ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಟಿಕೆಟ್ ಸಂಘಟನೆಗೋ?? ಪುತ್ರಿ ಗೋ……
ಒಟ್ಟಾರೆಯಾಗಿ ಸಾಗರ ವಿಧಾನಸಭಾ ಕ್ಷೇತ್ರದಾದ್ಯಂತ ಅಸಂಖ್ಯಾತ ಅಭಿಮಾನಿಗಳು,ಯುವ ಪಡೆ ಹಾಗೂ ನಿರಂತರ ಪಕ್ಷ ಸಂಘಟನೆ ಮಾಡುತ್ತಿರುವ ಗೋಪಾಲಕೃಷ್ಣ ಬೇಳೂರು ರವರಿಗೆ ಹೈಕಮಾಂಡ್ ಮಣೆ ಹಾಕುತ್ತೋ ಅಥವಾ ಕಾಗೋಡು ಪುತ್ರಿ ಹಾಗೂ ಕೆಪಿಸಿಸಿ ವಕ್ತಾರೆ ರಾಜನಂದಿನಿಗೆ ಮಣೆ ಹಾಕುತ್ತೋ ಕಾದು ನೋಡಬೇಕಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

12 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

19 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago